ಹಾಸನ

ಜಿಲ್ಲಾ ಶೈಕ್ಷಣಿಕ ಕಾರ್ಯಾಗಾರ

Published On :

ಹಾಸನ: ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಸಾರ್ವಜನಿಕ ಶಿಕ್ಷಣ  ಇಲಾಖೆ ಆಶ್ರಯದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸರ ಜನ್ಮ ದಿನಾಚರಣೆ  ಅಂಗವಾಗಿ ಫೆ. 25ರಂದು ಬೆಳಿಗ್ಗೆ 9 ಗಂಟೆಗೆ ನಗರದ ಎಸ್‌ಆರ್‌ಎಸ್ ಕಲ್ಯಾಣ  ಮಂಟಪದಲ್ಲಿ ದೈಹಿಕ ಶಿಕ್ಷಣ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ನಡೆಯಲಿದೆ.
ಖೋಖೋ, ಕಬಡ್ಡಿ ಕ್ರೀಡೆಗಳಲ್ಲಿ ತಾಂತ್ರಿಕ ಕೌಶಲ್ಯಗಳು ಮತ್ತು ನಿಯಮಗಳು, ದೈಹಿಕ ಶಿಕ್ಷಣ ಮೌಲ್ಯ ಮಾಪನದ ಬಗ್ಗೆ ಉಪನ್ಯಾಸ ನೀಡುವರು. ಉತ್ತಮ ದೈಹಿಕ ಶಿಕ್ಷಣ ಶಿಕ್ಷಕರನ್ನು ಜಿಲ್ಲಾ ನೇತಾಜಿ ಪ್ರಶಸ್ತಿ ನೀಡಿ ಗೌರವಿಸಲಾಗವುದು. ಎಸ್‌ಎಸ್‌ಎಲ್‌ಸಿ ,ಪಿಯುಸಿ, ಉನ್ನತ ವ್ಯಾಸಂಗದಲ್ಲಿ ಹೆಚ್ಚು ಅಂಕಗಳಿಸಿದ್ದ ದೈಹಿಕ ಶಿಕ್ಷಣ ಶಿಕ್ಷಕರ ಮಕ್ಕಳನ್ನು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಗುವುದು.



ತೀರ್ಥರಾಜುಗೆ ರನ್ನರ್ ಅಪ್ ಪ್ರಶಸ್ತಿ
ಹಾಸನ: ಬೆಂಗಳೂರಿನಲ್ಲಿ ನಡೆದ ರಾಜ್ಯ ಪೊಲೀಸ್ ಕ್ರೀಡಾಕೂಟದಲ್ಲಿ ಸಿಐಡಿ ವಿಭಾಗದ   ಡಿವೈಎಸ್ಪಿ ಹಾಸನದ ಹೆಚ್.ಎ. ತೀರ್ಥರಾಜು ಷಟ್ಲ್ ಬ್ಯಾಡ್‌ಮಿಂಟನ್ ಡಬಲ್ಸ್‌ನ ಫೈನಲ್ ಪಂದ್ಯದಲ್ಲಿ ರನ್ನರ್ ಅಪ್ ಪ್ರಶಸ್ತಿ ಗಳಿಸಿದರು.  ಕೆ.ಜೆ. ಜಾರ್ಜ್ ಅವರ ಪತ್ನಿ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರಿನಲ್ಲಿ ನಡೆದಿದ್ದ ಸಿಐಡಿ ಮತ್ತು ವಿಶೇಷ ಘಟಕಗಳ  ಕ್ರೀಡಾಕೂಟದಲ್ಲಿ ಷಟಲ್ ಡಬಲ್ಸ್‌ನಲ್ಲಿ ಇವರು ವಿಜೇತರಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಕಳೆದ ವರ್ಷದ  ರಾಜ್ಯಮಟ್ಟದ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.