ಮನೆ ಕಸ ಸಂಗ್ರಹಿಸಲು ಬಕೆಟ್ ವಿತರಣೆ
ಬೇಲೂರು: ಬೇಲೂರು ವಿಶ್ವ ಪ್ರಸಿದ್ದ ಪ್ರವಾಸಿ ತಾಣವಾಗಿದ್ದು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ ಆ ದೃಷ್ಟಿಯಿಂದ ಪಟ್ಟಣದ ನಾಗರಿಕರು ಕಸ ಕಡ್ಡಿಗಳನ್ನು ಎಲ್ಲೆಂದರಲ್ಲಿ ಹಾಕದೆ ಪುರಸಭೆ ವತಿಯಿಂದ ನೀಡುತ್ತಿರುವ ಬಕೆಟ್ಗಳಲ್ಲಿ ಕಸ ಕಡ್ಡಿಗಳನ್ನು ಹಾಕಿಟ್ಟು ಬೀದಿಗಳಿಗೆ ಕಸ ಸಂಗ್ರಹಿಸಲು ಬರುವಂತಹ ಆಟೋಗಳಿಗೆ ಹಾಕುವ ಮೂಲಕ ಪಟ್ಟಣದ ಸ್ವಚ್ಛತೆಯನ್ನು ಕಾಪಾಡ ಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಜಿ. ಶಾಂತಕುಮಾರ್ ತಿಳಿಸಿದರು.
ಪಟ್ಟಣದ 6ನೇ ವಾರ್ಡ್ನಲ್ಲಿ ಪುರಸಭೆ ವತಿಯಿಂದ ಮನೆ- ಮನೆಗೆ ಕಸ ಸಂಗ್ರಹಿಸುವ ಸಂಬಂಧ ನೀಡಲಾದ ಬಕೆಟ್ಗಳನ್ನು ವಿತರಿಸಿ ಮಾತನಾಡಿದರು. ಜನರು ತಮ್ಮ ಮನೆಗಳಲ್ಲಿ ಬಳಸಿ ಉಳಿದ ಅನುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯದೆ ಪಟ್ಟಣದ ಅಂದವನ್ನು ಹೆಚ್ಚಿಸುವುದರ ಜೊತೆಗೆ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಪಟ್ಟಣದ ಸಾರ್ವಜನಿಕರು ಪುರಸಭೆ ವತಿಯಿಂದ ವಿತರಿಸುತ್ತಿರುವ ಬಕೆಟ್ಗಳಲ್ಲಿ ಹಸಿ ಹಾಗೂ ಒಣಗಿದ ಕಸವನ್ನು ಬೇರ್ಪಡಿಸಿ ಹಾಕುವುದರಿಂದ ಕಸವನ್ನು ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಬಸವರಾಜು, ಆರೋಗ್ಯಾಧಿಕಾರಿ ವೆಂಕಟೇಶ್, ಸಿಬ್ಬಂದಿ ಜಯರಾಮ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

