ಹಾಸನ

ಮಾ. 2, ಛಲವಾದಿ ಮಹಾಸಭಾ ಸಮಾವೇಶ

Published On :

ಹಾಸನ: ಛಲವಾದಿ ಮಹಾಸಭಾದ ಬೃಹತ್ ಸಮಾವೇಶ ಮಾ. 2ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಛಲವಾದಿ ಮಹಾ ಸಭಾದ ಅಧ್ಯಕ್ಷ ಎಚ್.ಆರ್. ನಾರಾಯಣ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೃಹತ್ ಮಹಾ ಸಮಾವೇಶದಲ್ಲಿ ಸುಮಾರು 10 ಲಕ್ಷ ಛಲವಾದಿ ಜನಾಂಗದವರು ಒಂದು ಕಡೆ ಸೇರಿ ಜನಾಂಗಿಯ ಅಭಿವೃದ್ಧಿಗಳ ಬಗ್ಗೆ ಆಂದೋಲವನ್ನು ನಡೆಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಿಂದ ಪಟ್ಟಣ ಪ್ರದೇಶದವರೆಗೂ ಜನಾಂಗೀಯ ಏಕ ಸಾಮ್ಯತೆಯ ಬಗ್ಗೆ ಅರಿವು ಮೂಡಿಸುವ ಯೋಜನೆ ರೂಪಿಸಲಾಗುತ್ತದೆ ಎಂದು ಹೇಳಿದರು.
ಗಣ್ಯರ ಆಗಮನ: ರಾಜ್ಯ ಛಲವಾದಿ ಮಹಾಸಭಾದ ಅಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಚಲನಚಿತ್ರ ನಟ ಕೆ. ಶಿವರಾಂ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಘಟನೆಯನ್ನು ಚುರುಕುಗೊಳಿಸಲಾಗುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕೇಂದ್ರ ರೇಲ್ವೆ ಖಾತೆ ಸಚಿವ ಮಲ್ಲಿಕಾರ್ಜುನ ಖಗೆಂ,  ವಿ.ಶ್ರೀನಿವಾಸ್, ಸಚಿವ ಎಚ್.ಸಿ. ಮಹಾದೇವಪ್ಪ, ಮಾಜಿ ಮಂತ್ರಿ ಮೋಟಮ್ಮ, ವಿಧಾನ ಪರಿಷತ್ ಸದಸ್ಯರು, ಸಂಸದ ಮುನಿಯಪ್ಪ ಸೇರಿದಂತೆ ನೂರಾರು ಜನ ಗಣ್ಯರು ಭಾಗವಹಿಸಲಿದ್ದಾರೆ.
ಜಿಲ್ಲೆಯಲ್ಲಿ 3 ಲಕ್ಷದಷ್ಟು  ಛಲವಾದಿ ಜನಸಂಖ್ಯೆ ಇದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿ ಇದೆ. ಸಮಾವೇಶಕ್ಕೆ ಕರೆತರಲು ಜಿಲ್ಲೆಗೆ 100 ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದ ಅವರು, ಈಗಾಗಲೇ 10 ಜಿಲ್ಲೆಗಳಲ್ಲಿ ಛಲವಾದಿ ಮಹಾಸಭಾದ ಭವನಗಳ ನಿರ್ಮಾಣವಾಗುತ್ತಿದೆ.
ಬೆಂಗಳೂರು ಒಂದರಲ್ಲಿಯೇ 100 ಕೋಟಿ ರು. ಆಸ್ತಿ ಹೊಂದಿದ್ದು, 50 ಕೋಟಿ ರು. ವೆಚ್ಚದಲ್ಲಿ ಭವನ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಛಲವಾದಿ ಮಹಾ ಸಭಾದ ಉಪಾಧ್ಯಕ್ಷ ಎಚ್.ಆರ್. ನಾಗೇಂದ್ರ, ಎನ್. ಕೃಷ್ಣಮೂರ್ತಿ, ಬಿ.ಎಂ. ರಂಗಸ್ವಾಮಿ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.