ಪಲ್ಸ್ ಪೊಲಿಯೋ ಯಶಸ್ಸಿಗೆ ಎಲ್ಲರ ಸಹಕಾರ ಬೇಕು
ಹಾಸನ: ಜಿಲ್ಲೆಯಾದ್ಯಂತ ಫೆ. 23ರಂದು ನಡೆಯುವ ಎರಡನೇ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಕಾರ ನೀಡಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಕೋರಿದ್ದಾರೆ.
ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಚಾಲನೆ ಸಮಿತಿ ಸಭೆಯನ್ನು ಶುಕ್ರವಾರ ನಡೆಸಿದ ಅವರು, ಜನವರಿಯಲ್ಲಿ ನಡೆದ ಮೊದಲ ಹಂತದ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅದೇ ರೀತಿ ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಯಾವುದೇ ಲೋಪವಿಲ್ಲದಂತೆ ಪೂರ್ಣಗೊಳಿಸಲು ಕೈಜೋಡಿಸಬೇಕೆಂದು
ಗ್ರಾಪಂಗಳಿಗೆ ಸೂಚನೆ: ಆಯಾ ತಾಲ್ಲೂಕುಗಳಿಗೆ ಅಗತ್ಯವಿರುವಷ್ಟು ಪ್ರಮಾಣದ ವಾಹನಗನ್ನು ಫೆ. 22ರಂದು ಸಾರಿಗೆ ಇಲಾಖೆ ಒದಗಿಸಲಿದೆ. ಕೊರತೆ ಕಂಡುಬಂದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಅನುದಾನ ಬಳಸಿ ವಾಹನ ಬಾಡಿಗೆ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದರು. ಲಸಿಕಾ ಕಾರ್ಯದಲ್ಲಿ ತೊಡಗುವವರಿಗೆ ಊಟೋಪಚಾರ ಒದಗಿಸಲು ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ವಿವಿಧ ಇಲಾಖೆಗಳಿಗೆ ಸೂಚನೆ: ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೆರವು ಅಮೂಲ್ಯವಾಗಿದ್ದು ಅವರೆಲ್ಲರನ್ನೂ ಸರಿಯಾಗಿ ತೊಡಗಿಸಿಕೊಳ್ಳಬೇಕು. ಲಸಿಕೆಯನ್ನು ಶೀಥಲ ಸರಪಳಿಯಲ್ಲಿಡಲಾಗಿದ್ದು ಕಾರ್ಯಕ್ರಮದ ಅವಧಿಯಲ್ಲಿ ಅಂದರೆ ಫೆ. 23ರಿಂದ 26ರವರೆಗೆ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರ, ಪಟ್ಟಣ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಯಶಸ್ಸಿನ ಜವಾಬ್ದಾರಿಯನ್ನು ಸಂಬಂಧಪಟ್ಟ ನಗರಸಭೆ- ಪುರಸಭೆ, ಪಟ್ಟಣ ಪಂಚಾಯ್ತಿ ವಹಿಸಿಕೊಂಡು ಸಹಕಾರ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮ ಅಧಿಕಾರಿ ವಿಜಯೇಂದ್ರ ಅವರು ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು.
59 ಯೋಜನಾ ತಂಡ: ಜಿಲ್ಲೆಯಲ್ಲಿ 18,22,632 ಜನರಿದ್ದು 4,09,078 ಮನೆಗಳಿವೆ. ಐದು ವರ್ಷದೊಳಗಿನ 1,84,367 ಮಕ್ಕಳಿದ್ದು ಇವರಿಗೆ ಪೋಲಿಯೋ ಲಸಿಕೆ ಹಾಕಲು 872 ಬೂತ್ ಗಳು, 15 ಟ್ರಾನ್ಸಿಟ್ ತಂಡಗಳು, 9 ಸಂಚಾರಿ ವಾಹನ ತಂಡಗಳು, 3536 ಮಂದಿ ಲಸಿಕೆ ಹಾಕುವರು, 175 ಮಂದಿ ಮೇಲ್ವಿಚಾರಕರು, 59 ಯೋಜನಾ ತಂಡಗಳನ್ನು ರಚಿಸಲಾಗಿದೆ ಎಂದು ಡಾ.ವಿಜಯೇಂದ್ರ ತಿಳಿಸಿದರು.
ಪಲ್ಸ್ ಪೋಲಿಯೋ 0-5 ವರ್ಷದೊಳಗಿನ ಯಾವುದೇ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ಮುಂಜಾಗ್ರತೆ ವಹಿಸಿ ಉಚಿತವಾಗಿ ಕಾರ್ಯ ನಿರ್ವಹಿಸಬೇಕು. ಕಳೆದ ಬಾರಿ ಕೊರತೆಕಂಡುಬಂದ ಬೂತ್ಗಳಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದ ಲಸಿಕೆ ಒದಗಿಸಬೇಕು. ಸಂಚಾರಿ ತಂಡಗಳು ನಿರಂತರ ಸಂವಹನದಲ್ಲಿದ್ದು ಕಾರ್ಯ ನಿರ್ವಹಿಸಬೇಕು ಎಂದು ಯು.ಪಿ. ಸಿಂಗ್ ಸಲಹೆ ಮಾಡಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಂಕರ್, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಕರಿಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ಯಾಮಲಾದೇವಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚಿದಾನಂದ್ ನಾನಾ ತಾಲ್ಲೂಕುಗಳ ವೈದ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ನಾನಾ ಇಲಾಖಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

