ಜಿ. ಹೊಸಳ್ಳಿಗೆ ಸೌಕರ್ಯದ ಭರವಸೆ
ಹಾಸನ: ಹಿಂದುಳಿದ ಮತ್ತು ಶೀತ ಪೀಡಿತ ಪ್ರದೇಶವೆಂದು ಘೋಷಿಸಿರುವ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಜಿ. ಹೊಸಳ್ಳಿ ಗ್ರಾಮದ ಜನರಿಗೆ 129 ಜನರಿಗೆ ನಿವೇಶನ ಹಂಚಿಕೆ ಹಕ್ಕು ಪತ್ರ ವಿತರಿಸಲಾಗಿದೆ.
ಉಳಿದ 31 ನಿವೇಶನ ಹಂಚಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವರಾದ ವಿ. ಶ್ರೀನಿವಾಸ ಪ್ರಸಾದ್ ಇವರು ವಿಧಾನ ಪರಿಷತ್ ಸದಸ್ಯರಾದ ಪಟೇಲ್ ಶಿವರಾಂ ಅವರು ವಿಧಾನ ಪರಿಷತ್ನಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.
ಈ ನಿವೇಶನದಲ್ಲಿ ಪರಿಶಿಷ್ಟರಿಗೆ ಒಟ್ಟು 50 ಮನೆಗಳನ್ನು ನಿರ್ಮಿಸಲಾಗಿದೆ. ಇವುಗಳಿಗೆ ವಿದ್ಯುತ್ಸ್ಂಪರ್ಕ ಕಲ್ಪಿಸಲು ಸಹಾಯಕ ಕಾರ್ಯಪಾಲಕ ಅಭಿಯಂತರರಿಂದ ರೂ. 15 ಲಕ್ಷಗಳಿಗೆ ಅಂದಾಜು ಪಟ್ಟಿ ತಯಾರಿಸಿ, ಕಾವೇರಿ ನೀರಾವರಿ ನಿಗಮದ ವಿದ್ಯುತ್ ಉಪವಿಭಾಗದಿಂದ ಅನುಮೋದನೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಆಗಬೇಕಾಗಿದೆ. ಉಳಿದ ಮೂಲಭೂತ ಸೌಕರ್ಯಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಮೂಲ ಸೌಲಭ್ಯಕ್ಕೆ ಸರ್ಕಾರದಿಂದ ಒಟ್ಟು ರು. 84,09,158 ಗಳ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ರು. 35,90,000 ಖರ್ಚಾಗಿರುತ್ತದೆಂದು ಅವರು ತಿಳಿಸಿದರು. ಸದರಿ ಗ್ರಾಮಕ್ಕೆ ಮೂಲ ಸೌಲಭ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ಇತ್ಯಾದಿಗಳನ್ನು ಈಗಾಗಲೇ ಕಲ್ಪಿಸಲಾಗಿದ್ದು, ಉಳಿದಂತೆ ವಿದ್ಯುತ್ ಸಂಪರ್ಕವನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಕಂದಾಯ ಸಚಿವರು ತಿಳಿಸಿದರು. ಬರ ಪ್ರದೇಶಗಳಿಗೆ ಅನುದಾನ: ಹಾಸನದ ಕೃಷಿ ಇಲಾಖೆ ರು. 135 ಕೋಟಿ ಬೆಳೆ ನಷ್ಟಕ್ಕೆ ಸಲ್ಲಿಸಿರುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಕೇಂದ್ರದಿಂದ ಅನುದಾನ ಬಂದ ನಂತರ ಬೆಳೆ ನಷ್ಟಕ್ಕೆ ಪರಿಹಾರ ನೀಡಲಾಗುವುದೆಂದು ಕಂದಾಯ ಸಚಿವರಾದ ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ. ಎಂಎಲ್ಸಿ ಪಟೇಲ್ ಶಿವರಾಂ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.
ಬರ ಪೀಡಿತ ತಾಲ್ಲೂಕುಗಳಲ್ಲಿ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮತ್ತು ಗೋಶಾಲೆ ಪ್ರಾರಂಭಿಸಲು ರು. 200 ಲಕ್ಷ ಬಿಡುಗಡೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯಕ್ಕೆ ಸಲ್ಲಿಸಿದ್ದು ನಷ್ಟದ ಪ್ರಮಾಣದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲವೆಂದು ಸಚಿವರು ತಿಳಿಸಿದರು.
ಮಾಲಿನ್ಯ ತಡೆಗಟ್ಟಲು ಕ್ರಮ: ನಾಡಿನ ಜೀವನದಿ ಕಾವೇರಿ ಬಹುತೇಕ ಕಲುಷಿತಗೊಂಡು ತನ್ನ ಪಾವಿತ್ರತೆ ಮತ್ತು ಶುದ್ಧತೆಯನ್ನು ಕಳೆದುಕೊಂಡಿರುವ ಪ್ರಮಾಣದ ಬಗ್ಗೆ ನೀಡಿದ ವರದಿ ಸರ್ಕಾರಕ್ಕೆ ಸ್ವೀಕೃತವಾಗಿರುವುದಿಲ್ಲವೆಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ವಿಧಾನ ಪರಿಷತ್ ಸದಸ್ಯರಾದ ಪಟೇಲ್ ಶಿವರಾಂ ಅವರು ವಿಧಾನ ಪರಿಷತ್ನಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.
ಸೆಮಿಸ್ಟರ್ ಪದ್ಧತಿ: ಐ.ಟಿ.ಐ ತರಬೇತುದಾರರಿಗೆ ಜುಲೈ- 2013ನೇ ಸಾಲಿನಲ್ಲಿ ಪ್ರವೇಶ ಪಡೆದವರಿಗೆ ಸೆಮಿಸ್ಟರ್ ಪದ್ಧತಿ ಜಾರಿಯಾಗುತ್ತದೆ.
ಇದನ್ನು ಡಿ.ಜಿ.ಇ.ಟಿ. ನಿಯಮಾವಳಿಗಳಂತೆ ದೇಶಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಸಚಿವರಾದ ಪಿ.ಟಿ. ಪರಮೇಶ್ವರ ನಾಯ್ಕ ಅವರು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಾನ ಪರಿಷತ್ನಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

