ಹಾಸನ

ಬಿಸಿಲೆ ಅರಣ್ಯದಲ್ಲಿ ನಕ್ಸಲ್ ಕೂಂಬಿಂಗ್

Published On :

ಸಕಲೇಶಪುರ: ತಾಲೂಕು ವ್ಯಾಪ್ತಿಯ ಬಿಸಿಲೆ ಅರಣ್ಯದಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಸೋಮವಾರದಿಂದ ಪ್ರಾರಂಭಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಸುಬ್ರಮಣ್ಯಕ್ಕೆ ಹೊಂದಿಕೊಂಡ ಅರಣ್ಯದಲ್ಲಿ ನಕ್ಸಲರು ಇದ್ದರೆಂಬ ಹಿನ್ನಲೆಯಲ್ಲಿ ತಾಲೂಕು ವ್ಯಾಪ್ತಿಯ ಬಿಸಲೆ ಅರಣ್ಯದಲ್ಲಿ ಸ್ಥಳೀಯ ಪೊಲೀಸರು ಮತ್ತು ನಕ್ಸಲ್ ಪಡೆ ಕಾರ್ಯಚರಣೆ ನಡೆಸಲು ಸಿದ್ಧತೆ ನಡೆಸಿದ್ದು, ನಕ್ಸಲ್ ನಿಗ್ರಹ ಪಡೆಯ 55 ಸಿಬ್ಬಂದಿ ಯಸಳೂರು ಹಾಗೂ ಗ್ರಾಮಾಂತರ ಠಾಣೆಯ ಇಬ್ಬರು 2 ಪಿಎಸೈ ಹಾಗೂ ಸಿಬ್ಬಂದಿ ಹಾಗೂ ಓರ್ವ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಚರಣೆ ನಡೆಸಲಿದೆ ಎಂದು ತಿಳಿದು ಬಂದಿದ್ದು, ಸೋಮವಾರ ಬಿಸಿಲೆ ಗ್ರಾಮದಲ್ಲಿ ಬಿಡುಬಿಟ್ಟಿರುವ ತಂಡ ಸಮೀಪದ ಅರಣ್ಯದೊಳಗೆ ಕೆಲಕಾಲ ಶೋದ ಕಾರ್ಯಚರಣೆ ನಡೆಸಿದರು. ಯಾವುದೇ ಸುಳಿವು ಲಭ್ಯವಾಗಿಲ್ಲ ಎನ್ನಲಾಗಿದೆ.
ಅಕ್ರಮವಾಗಿ ಕಲ್ಲು ಸಾಗಣೆ: ಬಂಧನ
ಹಾಸನ: ಅಕ್ರಮವಾಗಿ ಸೈಜುಕಲ್ಲುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಜಾವಗಲ್ನ ಕೋಳಗುಂದ ಗ್ರಾಮದ ಅರಕೆರೆ ಬಂಡೆ ಕಡೆಯಿಂದ ಟ್ರ್ಯಾಕ್ಟರ್ನಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಸುಮಾರು 3200 ಬೆಲೆಯ 400 ಸೈಜುಕಲ್ಲುಗಳನ್ನು ಸಾಗಿಸುತ್ತಿದ್ದ ಮಂಜುನಾಥನನ್ನು ಬಂಧಿಸಿದ್ದು, ಸೈಜುಕಲ್ಲು ಸಮೇತ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದು, ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರು ನಾಪತ್ತೆ
ಹಾಸನ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಸನ ತಾಲೂಕಿನ ಸಾಲಗಾಮೆ ಹೋಬಳಿ, ದ್ಯಾಪಲಾಪುರ ಗ್ರಾಮ ವಾಸಿ ಗಂಗಾಧರ್ ಅವರ ಪುತ್ರಿ ಬೃಂದ(19) ಹಾಸನ ಸರ್ಕಾರಿ ಮಹಿಳಾ ಕಲಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಎಂದಿನಂತೆ ಕಾಲೇಜಿಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ಇದುವರೆಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. 5 ಅಡಿಎತ್ತರ, ಎಣ್ಣೆಗೆಂಪು ಬಣ್ಣ, ದುಂಡುಮುಖ, ಸಾಧಾರಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ತಾಯಿ ಕಮಲಮ್ಮ ಹಾಸನ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಸಾಲಗಾಮೆದಲ್ಲಿ: ಹಾಸನ ತಾಲೂಕಿನ ಸಾಲಗಾಮೆ ಹೋಬಳಿ, ಉಗನೆ ಗ್ರಾಮದ ಗೋವಿಂದೇಗೌಡ ಪುತ್ರಿ ಮೇಘ(19) ಮನೆಯಿಂದ ಹೊರಗೆ ಹೋದವಳು ಇದುವರೆವಿಗೂ ಇದುವರೆಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾಳೆ.  5.5 ಅಡಿ ಎತ್ತರ, ಗೋಧಿಮೈಬಣ್ಣ, ದುಂಡುಮುಖ, ಸಾಧಾರಣಾ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಬಿಳಿ ಮತ್ತು ಕೆಂಪು ಬಣ್ಣದ ಚೂಡಿದಾರ ಧರಿಸಿರುತ್ತಾಳೆ. ತಂದೆ ಗೋವಿಂದೇಗೌಡ ರವರು ಕೊಟ್ಟ ದೂರಿನ ಮೇರೆಗೆ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳಾಪುರದಲ್ಲಿ: ಮತ್ತೊಂದು ಪ್ರಕರಣದಲ್ಲಿ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ, ಕೇರಳಾಪುರ ಗ್ರಾಮದ ರಾಘವೇಂದ್ರ ಪತ್ನಿ ಕುಮಾರಿ(23) ಮನೆಯಿಂದ ಹೊರಗೆ ಹೋದವಳು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ. 5.2 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ. ಪತಿ ರಾಘವೇಂದ್ರ ರವರು ಕೊಣನೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ: ಅರಸೀಕೆರೆ ಪಟ್ಟಣದ ಬಸವೇಶ್ವರ ನಗರ ವಾಸಿ ರಾಮು ರವರ ಪುತ್ರಿ ಮಾನಸ(18) ಕಾಲೇಜಿಗೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾಳೆ.  5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಕನ್ನಡ ಭಾಷೆ ಮಾತನಾಡುತ್ತಾಳೆ. ತಂದೆ ರಾಮು ರವರು ಅರಸೀಕೆರೆ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.