28ರಿಂದ ಫುಟ್ಬಾಲ್ ಪಂದ್ಯಾವಳಿ
ಹಾಸನ: ರಾಜ್ಯಮಟ್ಟದ ಹೊನಲು ಬೆಳಕಿನ ಟೈಗರ್-5 ಫುಟ್ಬಾಲ್ ಪಂದ್ಯಾವಳಿಗಳನ್ನು ಜಿಲ್ಲಾ ಕ್ರೀಡಾಂಗಣದ ಫುಟ್ಬಾಲ್ ಮೈದಾನದಲ್ಲಿ ಫೆ.28ರಿಂದ ಮಾ.2ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಾಸನ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಅಧ್ಯಕ್ಷ ವೇಣುಗೋಪಾಲ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಪಂದ್ಯಾವಳಿಗೆ ನಾನಾ ಜಿಲ್ಲೆಗಳಿಂದ ಹಾಗೂ ರಾಜ್ಯಗಳಿಂದ ತಂಡಗಳು ಆಗಮಿಸಲಿವೆ. ಈವರೆಗೆ 27 ತಂಡಗಳು ನೋಂದಣಿ ಮಾಡಿಸಿಕೊಂಡಿವೆ. ಈ ತಂಡದಲ್ಲಿ ರಾಷ್ಟ್ರೀಯ ಆಟಗಾರರು ಸಹ ಪಾಲ್ಗೊಳ್ಳಲಿದ್ದಾರೆ ಎಂದರು.
ಕಳೆದ 5 ವರ್ಷಗಳಿಂದ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗಳನ್ನು ನಡೆಸಿಕೊಂಡು ಬರುತ್ತಿದ್ದು, ಫುಟ್ಬಾಲ್ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷವು ಸಹ ಪಂದ್ಯಾವಳಿಗೆ ಬಂದಂತಹ ತಂಡಗಳಿಗೆ ಆಟಗಾರರಿಗೆ ಟಿಎ ಪ್ರಮಾಣ ಭತ್ಯೆ, ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದಾಗಿ ಪ್ರತಿ ವರ್ಷವು ಹೆಚ್ಚಿನ ತಂಡಗಳು ಆಗಮಿಸುತ್ತಿದ್ದು, ಪ್ರತಿವರ್ಷ ನಡೆದ ಎಲ್ಲಾ ಫುಟ್ಬಾಲ್ ಪಂದ್ಯಗಳನ್ನು ವೀಕ್ಷಿಸಿದ ಜನರು ಒಳ್ಳೆಯ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಇದರಿಂದಾಗಿ ನಮ್ಮ ಕ್ಲಬ್ ವತಿಯಿಂದ ಫುಟ್ಬಾಲ್ ಕ್ರೀಡೆಯನ್ನು ಬೆಳೆಸಲು ಪ್ರತಿವರ್ಷ ಮಕ್ಕಳಲ್ಲಿ ಫುಟ್ಬಾಲ್ ಬಗ್ಗೆ ಹೆಚ್ಚಿನ ಆಸಕ್ತಿ ಬರುವ ಸಲುವಾಗಿ ಪ್ರತಿವರ್ಷ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತಿದೆ. ಆದರೆ ಸಾಕಷ್ಟು ಅನುದಾನದ ಕೊರತೆ ಇದ್ದ ಕಾರಣ ಕಳೆದ ವರ್ಷ ಬೇಸಿಗೆ ಶಿಬಿರ ನಡೆಸಲು ಸಾಧ್ಯವಾಗಿಲ್ಲ ಎಂದರು.
ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ 35 ಸಾವಿರ ದ್ವಿತೀಯ ಬಹುಮಾನ 25 ಸಾವಿರವಿದ್ದು, ಪಂದ್ಯಾವಳಿಗೆ 3 ಲಕ್ಷ ವೆಚ್ಚವಾಗಲಿದೆ ಎಂದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಚ್.ಎಲ್. ಹೇಮಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಚ್.ಜಿ. ವಿಜಯ್ ಕುಮಾರ್, ಎಂ.ಆರ್. ಕೃಷ್ಣಕಾಂತ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

