ಹಾಸನ

ಗೊಲ್ಲರಹಟ್ಟಿ ಅಭಿವೃದ್ಧಿಗೆ ಹಣ ಮೀಸಲು

Published On :

ಹಾಸನ: ರಾಜ್ಯದ ಎಲ್ಲ ಗೊಲ್ಲರಹಟ್ಟಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹಣವನ್ನು ಮೀಸಲಿಟ್ಟಿರುವುದು ಶ್ಲಾಘನೀಯ ಎಂದು ಜಿಲ್ಲಾ ಯಾದವ ಯುವ ವೇದಿಕೆ ಜಿಲ್ಲಾಧ್ಯಕ್ಷ ಎ.ಎಂ. ಅಜಯ್ ಹೇಳಿದರು.
  ಸರ್ಕಾರ ತಮ್ಮ ಬಜೆಟ್‌ನಲ್ಲಿ ಗೊಲ್ಲರಹಟ್ಟಿಗಳ ಅಭಿವೃದ್ಧಿಗೆ 50 ಕೋಟಿ ಮೀಸಲಿಟ್ಟಿದೆ ಶ್ಲಾಘೀಸಿ, ಹಿಂದುಳಿದ ವರ್ಗಗಳ ವಿರೋಧಿಯಾಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಕಾಂಗ್ರೆಸ್‌ನಲ್ಲಿ ಇದ್ದಾಗ ಎಲ್ಲಾ ರೀತಿಯ ಅಧಿಕಾರ ಅನುಭವಿಸಿ ಈಗ ಜೆಡಿಎಸ್‌ಗೆ ಹೋದ ನಂತರ ಯಾದವ ಜನಾಂಗದವರನ್ನು ಹೊಡೆದು ಹಾಳುವಂತಹ ನೀತಿಯನ್ನು ಅನುಸರಿಸುತ್ತಿದ್ದಾರೆಂದು ಆರೋಪಿಸಿದರು.
ರಾಜಕೀಯಕ್ಕೆ ಬಳಕೆ: ಇತ್ತೀಚೆಗೆ ಅರಸೀಕೆರೆ ತಾಲೂಕಿನ ಯಾದವ ಸಮಾಜದ ಮುಖಂಡರು ಧಾರ್ಮಿಕ ಕಾರ್ಯಕ್ರಮವನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಶಾಸಕರು ಹಾಗೂ ಎ.ಕೃಷ್ಣಪ್ಪನವರು ಇದನ್ನು ರಾಜಕೀಯವಾಗಿ ಬಳಿಸಿಕೊಂಡಿದ್ದಾರೆ. ಅಲ್ಲದೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಇಂತಹ ಕಡೆಗಳಲ್ಲಿ ಕೆಲವೊಂದು ಮೂಡನಂಬಿಕೆ ಹಾಗೂ ಕಂದಾಚಾರದಂತಹ ಆಚರಣೆಗಳನ್ನು ಅನುಸರಿಸುತ್ತಿದ್ದಾರೆಂದು ಕಿಡಿಕಾರಿದರು.
ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ: ಅರಸೀಕೆರೆ ತಾಲೂಕಿನ ಯಾದವ ಸಮಾಜದ ಅಧ್ಯಕ್ಷ ಬಂಡಿಗೌಡರ ರಾಜಣ್ಣ ಹಾಗೂ ಕೆಲ ಮುಖಂಡರು ಶಾಕರ ಓಲೈಸಿಕೊಂಡು ಜೀವನ ನಡೆಸುತ್ತಿದ್ದಾರೆ ವಿನಃ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ. ಆದ್ದರಿಂದ ಅರಸೀಕೆರೆ ತಾಲೂಕಿನ ಯಾದವ ಸಮಾಜದ ಅಧ್ಯಕ್ಷರು ಮತ್ತು ಸಂಘದ ಪದಾಧಿಕಾರಿಗಳು ಈ ಕೂಡಲೇ ರಾಜಿನಾಮೆ ನೀಡದೆ ಹೋದರೆ ರಾಜಣ್ಣ ಅಟಾವೋ ಮತ್ತು ಯಾದವ ಸಮಾಜ ಬಚಾವೋ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜಯರಾಂ ಯಾದವ್, ಅರಸೀಕೆರೆ ತಾಲೂಕು ಅಧ್ಯಕ್ಷ ರಮೇಶ್ ಯಾದವ್, ಮಧು, ಶಿವು, ಮಹಲಿಂಗಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.