ನಾಳೆಯಿಂದ ಜಿಲ್ಲಾ ಕಸಾಪ 14ನೇ ಸಮ್ಮೇಳನ
ಹಾಸನ: ಹದಿನಾಲ್ಕನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.28 ಮತ್ತು ಮಾ.1ರಂದು ಹಾಸನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಲ್. ಜನಾರ್ದನ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಹಿತಿ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ನ ನಿಕಟಪೂರ್ವ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಸಮ್ಮೇಳನಾಧ್ಯಕ್ಷರಾಗಿದ್ದು, ಸಮ್ಮೇಳನವನ್ನು ಕವಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಕೇಂದ್ರ ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಆಶಯ ನುಡಿಯಲಿದ್ದಾರೆ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಕುಲ ಸಚಿವ ಡಾ. ಎಂ.ಎಸ್. ಶೇಖರ್ ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಗಳನ್ನು ಹಾಡಲಿದ್ದಾರೆ.
ಸಂಚಿಕೆ ಬಿಡುಗಡೆ: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಹೊಯ್ಸಳ ಸಿರಿ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶಾಸಕರಾದ ಎಚ್.ಡಿ. ರೇವಣ್ಣ, ಎಚ್.ಎಸ್. ಪ್ರಕಾಶ್, ಎಚ್.ಕೆ. ಕುಮಾರಸ್ವಾಮಿ, ಎ. ಮಂಜು, ರುದ್ರೇಶ್ ಗೌಡ, ಶಿವಲಿಂಗೇಗೌಡ ಮತ್ತು ಬಾಲಕೃಷ್ಣ, ಜಿಪಂ ಅಧ್ಯಕ್ಷೆ ಅಂಬಿಕಾ ರಾಮಣ್ಣ, ನಗರಸಭೆ ಅಧ್ಯಕ್ಷೆ ವಿದ್ಯಾ ಆನಂದ್, ಹೊಯ್ಸಳ ಸಿರಿ ಗೌರವ ಸಂಪಾದಕ ಡಾ. ಎಚ್.ಎಲ್. ಮಲ್ಲೇಶ್ ಗೌಡ ಹಾಗೂ ಇತರರು ಭಾಗವಹಿಸಲಿದ್ದು, ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಮ್ಮೇಳನ ನಡೆಯಲಿದೆ ಎಂದರು.
ಧ್ವಜಾರೋಹಣ: ಎಸ್.ಕೆ. ಕರೀಂ ಖಾನ್ ಮಹಾಮಂಟಪ, ಕೆ. ಸಣ್ಣೇಗೌಡ ಮಹಾವೇದಿಕೆ, ಎಚ್.ಬಿ. ಜ್ವಾಲನಯ್ಯ ಮಹಾದ್ವಾರದಲ್ಲಿ ಸಮ್ಮೇಳನ ನಡೆಯಲಿದ್ದು, ಫೆ.28 ರಂದು ಬೆಳಗ್ಗೆ 8.30ಕ್ಕೆ ಕಸಾಪ ಆವರಣದಲ್ಲಿ ಜಿಲ್ಲಾಧಿಕಾರಿ ವಿ. ಅನು ಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಡಾ. ಜನಾರ್ಧನ್ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಪಂ ಸಿಇಒ ಉಪೇಂದ್ರ ಪ್ರತಾಪ್ ಸಿಂಗ್ ಪುಸ್ತಕ ಪ್ರದರ್ಶನ ಮಳಿಗೆ ಉದ್ಘಾಟಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ತಹಸೀಲ್ದಾರ್ ಮಂಜುನಾಥ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ.
ಮೆರವಣಿಗೆಗೆ ಚಾಲನೆ: ನಂತರ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೋಪಾಲ್ ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮೂರ್ತಪ್ಪ, ವಾರ್ತಾಧಿಕಾರಿ ವಿನೋದ್ ಚಂದ್ರ, ಅಮೋಘ ವಾಹಿನಿ ಮುಖ್ಯಸ್ಥ ಕೆ.ಪಿ.ಎಸ್.ಪ್ರಮೋದ್, ಪತ್ರಕರ್ತ ರವಿ ನಾಕಲಗೂಡು ಹಾಗೂ ಇತರರು ಭಾಗವಹಿಸಲಿದ್ದಾರೆ. ಮೆವರಣೆಗೆಯಲ್ಲಿ ಜಿಲ್ಲೆಯ ನಾನಾ ಶಾಲಾ ಕಾಲೇಜು, ಕನ್ನಡಪರ ಸಂಘಟನೆಗಳು ಮತ್ತು ಕಲಾತಂಡಗಳು ಭಾಗವಹಿಸಲಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಬಳಿಯಿಂದ ಮರೆವಣಿಗೆ ಪ್ರಾರಂಭವಾಗಿ ಮಹಾವೀರ ವೃತ್ತದ ಮೂಲಕ ಕೆ. ಸಣ್ಣೇಗೌಡ ವೇದಿಕೆಗೆ ಬರಲಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ತಂತ್ರಾಂಶ ಅಭಿವೃದ್ಧಿಗಾರರಾದ ಎಸ್.ಡಿ. ಆನಂದ್, ಮಂಜಾಚಾರಿ, ಸುಧೀರ್ರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.
ಗೋಷ್ಠಿಗಳು: ಹಾಸನ ಜಿಲ್ಲಾ ಸಾಹಿತ್ಯ, ಸಂಸ್ಕೃತಿ ಮತ್ತು ಪರಿಸರ ಕುರಿತ ಗೋಷ್ಠಿ, ಮಾ.1ರಂದು ಬೆಳಗ್ಗೆ 10ಕ್ಕೆ ಮಹಿಳಾ ಗೋಷ್ಠಿ, ಮಾಧ್ಯಮ ಗೋಷ್ಠಿ, ಐದನೇ ಗೋಷ್ಠಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದೆ. ಕವಿ ಗೋಷ್ಠಿ ಕವಿ ಸುಬ್ಬು ಹೊಲೆಯಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಜೆ 5ಕ್ಕೆ ಸಮಾರೋಪ ಸಮಾರಂಭ, ಆದಿಚುಂಚನಗಿರಿ ಶ್ರೀ ಸಾನಿಧ್ಯವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಸಮ್ಮೇಳನಾಧ್ಯಕ್ಷರಿಗೆ ಸನ್ಮಾನಿಸಲಿದ್ದಾರೆ.
ಒಟ್ಟಾರೆಯಾಗಿ ಸಮ್ಮೇಳನಕ್ಕೆ 7ರಿಂದ 8 ಲಕ್ಷ ವೆಚ್ಚ ತಗಲಲಿದ್ದು, ಕೇಂದ್ರ ಕಸಾಪದಿಂದ 4.5 ಲಕ್ಷ ನೀಡಲಿದೆ. ಉಳಿಕೆ ಹಣವನ್ನು ದಾನಿ ನೀಡುತ್ತಿದ್ದಾರೆ. ಈಗಾಗಲೇ ಸಮ್ಮೇಳನಕ್ಕೆ ಸಿದ್ಧತೆಯನ್ನು ನಡೆಸಿತ್ತಿದ್ದು, ಜಿಲ್ಲೆಯ ಜನತೆ ಸಮ್ಮೇಳನ ಯಶಸ್ವಿಯಾಗಿ ನಡೆಯಲು ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಹೊಯ್ಸಳ ಸಿರಿ ಗೌರವ ಸಂಪಾದಕ ಮಲ್ಲೇಶ್ ಗೌಡ, ಶಂಕರ್, ರಮೇಶ್, ಕೆ.ಆರ್. ಮಮತೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

