ಹಾಸನ

'ಬಿಸಿಲೆ' ನಕ್ಸಲ್ ಕಾರ್ಯಾಚರಣೆ

Published On :

ಸಕಲೇಶಪುರ: ತಾಲೂಕು ವ್ಯಾಪ್ತಿಯ ಬಿಸಿಲೆ ಅರಣ್ಯದಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆಯನ್ನು ಮಂಗಳವಾರದಿಂದ ಆರಂಭಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಸುಬ್ರಮಣ್ಯಕ್ಕೆ ಹೊಂದಿಕೊಂಡ ಅರಣ್ಯದಲ್ಲಿ ನಕ್ಸಲರು ಇದ್ದರೆಂಬ ಹಿನ್ನೆಲೆಯಲ್ಲಿ ತಾಲೂಕು ವ್ಯಾಪ್ತಿಯ ಕಾಗಿನರೆ, ಯಡಕುಮೇರಿ, ಹೊನ್ನಟ್ಲು, ಬಿಸ್ಲೆ, ಬಾಳೆಹಳ್ಳ, ಅರಣ್ಯದ ಸುತ್ತಮುತ್ತ ಮುಂಜಾನೆ 8 ರಿಂದ ಸಂಜೆ 5ರವರೆಗೆ ಕಾರ್ಯಾಚರಣೆ ನಡೆಸಿದರಾದರೂ ಯಾವುದೇ ಕರುಹು ಪತ್ತೆಯಾಗಿಲ್ಲ. ಕಾರ್ಯಾಚರಣೆಯಲ್ಲಿ ನಕ್ಸಲ್ ನಿಗ್ರಹ ಪಡೆಯ 55 ಸಿಬ್ಬಂದಿ ಯಸಳೂರು ಹಾಗೂ ಗ್ರಾಮಾಂತರ ಠಾಣೆಯ ಇಬ್ಬರು ಪಿಎಸೈ ಹಾಗೂ ಸಿಬ್ಬಂದಿ ಹಾಗೂ ಒರ್ವ ಸರ್ಕಲ್ ಇನ್ಸಪೆಕ್ಟರ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಒಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. ನಕ್ಸಲ್ ನಿಗ್ರಹ ಪಡೆಗೆ ತಾಲೂಕಿನ ಅರಣ್ಯದ ಪರಿಚಯವಿರಲಿ ಎಂಬ ಉದ್ದೇಶದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ವಿನಃ ತಾಲೂಕು ವ್ಯಾಪ್ತಿಗೆ ನಕ್ಸಲರು ಪ್ರವೇಶಿಸಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.