ಇಂದು 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ
ಕನ್ನಡಪ್ರಭ ವಾರ್ತೆ, ಹಾಸನ. ಮಾ.29
ಹದಿನಾಲ್ಕನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸಮ್ಮೇಳನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗುರುವಾರ ಸಕಲ ಸಿದ್ಧತೆಗಳನ್ನು ನಡೆಸಿದೆ.
ಫೆ.28 ಮತ್ತು ಮಾ.1ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ಧತೆಯನ್ನು ನಡೆಸಿದೆ. ಇದಕ್ಕಾಗಿ ಯುವ- ಹಿರಿಯ ಕವಿಗಳಿಗಾಗಿ ಕವಿಗೋಷ್ಠಿ ಮತ್ತು ಪ್ರಸ್ತುತ ಸಾಮಾಜಿಕ ಸಂದರ್ಭದಲ್ಲಿ ಎದುರಾಗಿರುವ ಸಮಸ್ಯೆಗಳು, ಹೊಣೆಗಾರಿಕೆ ಹಾಗೂ ಸಾಹಿತ್ಯ ಆಯಾಮಗಳು ಕುರಿತ ವಿಚಾರ ಸಂಕಿರಣಗಳನ್ನು ಏರ್ಪಡಿಸಿದ್ದು, ಪುಸ್ತಕ ಪ್ರದರ್ಶನ ನಡೆಸುವ ಸಲುವಾಗಿ ಅಂಗಡಿಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಫೆ.28 ರಂದು ಸಾಹಿತಿ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಸಮ್ಮೇಳನಾಧ್ಯಕ್ಷರಾಗಿದ್ದು, ಸಮ್ಮೇಳನವನ್ನು ಕವಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗೌರವ ಉಪಸ್ಥಿತಿವಹಿಸಲಿದ್ದಾರೆ. ಕೇಂದ್ರ ಕಸಾಪನ ಅಧ್ಯಕ್ಷ ಪುಂಡಲೀಕ ಹಾಲಂಬಿ ಆಶಯ ನುಡಿಯಲಿದ್ದಾರೆ. ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಕುಲ ಸಚಿವ ಡಾ. ಎಂ.ಎಸ್. ಶೇಖರ್ ನಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಗಳನ್ನು ಹಾಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹಾದೇವಪ್ಪ ಹೊಯ್ಸಳ ಸಿರಿ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶಾಸಕರಾದ ಎಚ್.ಡಿ. ರೇವಣ್ಣ, ಎಚ್.ಎಸ್. ಪ್ರಕಾಶ್, ಎಚ್.ಕೆ. ಕುಮಾರಸ್ವಾಮಿ, ಎ.ಮಂಜು, ರುದ್ರೇಶ್ ಗೌಡ, ಶಿವಲಿಂಗೇಗೌಡ ಮತ್ತು ಬಾಲಕೃಷ್ಣ, ಜಿಪಂ ಅಧ್ಯಕ್ಷೆ ಅಂಬಿಕಾ ರಾಮಣ್ಣ, ನಗರಸಭೆ ಅಧ್ಯಕ್ಷೆ ವಿದ್ಯಾ ಆನಂದ್, ಹೊಯ್ಸಳ ಸಿರಿ ಗೌರವ ಸಂಪಾದಕ ಡಾ. ಎಚ್.ಎಲ್. ಮಲ್ಲೇಶ್ ಗೌಡ ಹಾಗೂ ಇತರರು ಭಾಗವಹಿಸಲಿದ್ದು, ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಮ್ಮೇಳನ ನಡೆಯಲಿದೆ ಎಂದರು. ಸಾಹಿತ್ಯ ಪರಿಷತ್ ಆವರಣದಲ್ಲಿ ಪೆಂಡಾಲ್‌ಗಳನ್ನು ಹಾಕಿದರೆ ದುಂದು ವೆಚ್ಚವಾಗುತ್ತದೆ. ಅದಕ್ಕಾಗಿ ಕಾರ್ಯಕ್ರಮಗಳನ್ನು ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.
ರಾಜ್ಯದ ನಾನಾ ಭಾಗಗಳಿಂದ ಹಲವಾರು ಕಲಾತಂಡ ಬರಲಿದ್ದು, ಯಕ್ಷಗಾನ, ಚಿಟ್ಟಿಮೇಳ, ನಾಸಿಕ್ ಡೋಲು, ಹಾಸ್ಯಗೊಂಬೆ, ಹುಲಿವೇಷ ಸೇರಿದಂತೆ ಇತರೆ ಕಲಾಪ್ರದರ್ಶನಗಳನ್ನು ನೆರವೇರಿಸಲಿವೆ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

