ಇಂದು ಪ್ರೌಢಶಾಲೆ ಬಡ್ತಿ ಪಡೆದ ಸಹ ಶಿಕ್ಷಕರ ತುರ್ತುಸಭೆ
ಹೊಳೆನರಸೀಪುರ: ಪ್ರಾಥಮಿಕ ಶಾಲೆಗಳಿಂದ ಬಡ್ತಿ ಪಡೆದು ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಹತ್ತು ಹಲವು ಸಮಸ್ಯೆಗಳನ್ನು ಕುರಿತು ಚರ್ಚಿಸಲು ಅಖಿಲ ಕರ್ನಾಟಕ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ಪಡೆದ ಸಹ ಶಿಕ್ಷಕರ ಸಂಘವು ಫೆ.28 ರಂದು ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳ ಸಂಘದ ಪದಾಧಿಕಾರಿಗಳ ತುರ್ತು ಸಭೆ ಕರೆಯಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಟಿ.ಆರ್. ಧವರ್ರಾಜ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ಅವರುಗಳು, ಪ್ರಾಥಮಿಕ ಶಾಲೆಗಳಿಂದ ಬಡ್ತಿ ಪಡೆದು, ಪ್ರೌಢಶಾಲೆಗಳಲ್ಲಿ ಸಹ ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದುವರೆವಿಗೂ ಯಾವುದೇ ಪರಿಹಾರಗಳು ದೊರೆಯದಿರುವ ಕಾರಣದಿಂದ ಇಲಾಖೆಯು ಕಾಲ ಕಾಲಕ್ಕೆ ನೀಡುವ ಬಡ್ತಿಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.
ಮೊದಲಾದ ಹತ್ತು ಹಲವು ಸವಾಲುಗಳನ್ನು ಎದುರಿಸುತ್ತಿರುವ ಬಡ್ತಿ ಪಡೆದ ಪ್ರೌಢಶಾಲಾ ಶಿಕ್ಷಕರುಗಳ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಫೆ.28 ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೇಶವ ತಿಳಿಸಿದರು. ಆದ್ದರಿಂದ ಸಂಘದ ಪದಾಧಿಕಾರಿಗಳು ತಪ್ಪದೇ ಸಕಾಲದಲ್ಲಿ ಸಭೆಗೆ ಹಾಜರಾಗುವಂತೆ ಸಂಘದ ತಾಲೂಕು ಪದಾಧಿಕಾರಿಗಳು ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

