ತವರಿನಲ್ಲಿ ನಲ್ಲೂರುಗೆ ಆದ್ಧೂರಿ ಸ್ವಾಗತ
ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೊರೂರಿನಲ್ಲಿ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ನಲ್ಲೂರು ಪ್ರಸಾದ್ ಅವರನ್ನು ತವರು ಚನ್ನರಾಯಪಟ್ಟಣದಲ್ಲಿ ಜಿಲ್ಲಾ ಕಸಾಪ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು.
ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಜನಾರ್ದನ್ ಹಾಗೂ ಕಸಾಪ ಪದಾಧಿಕಾರಿಗಳು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ನಲ್ಲೂರು ಪ್ರಸಾದ್ ಅವರನ್ನು ಗೌರವಿಸಿ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಂಡು ಯಶಸ್ವಿ ಆಚರಣೆಗೆ ಅನುವು ಮಾಡಿಕೊಡಬೇಕೆಂದು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಡಾ. ನಲ್ಲೂರು ಪ್ರಸಾದ್ ಮಾತನಾಡಿ, ಕನ್ನಡ ಕಟ್ಟುವ ಹಾಗೂ ಬೆಳೆಸುವ ವಿಚಾರದಲ್ಲಿ ಯಾವ ಕನ್ನಡಿಗನಾದರೂ ಹಿಂದೆ ಸರಿಯದೆ ಯಾವ ಪದವಿ ಎಂಬುದನ್ನು ಬಿಟ್ಟು ಕನ್ನಡ ಉಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ತಿಳಿಸಿದರು.
ತವರು ಜಿಲ್ಲೆಯಲ್ಲಿ ನಡೆಯುವ ಸಮ್ಮೇಳನಕ್ಕೆ ತಮ್ಮನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿ ಆಹ್ವಾನಿಸುತ್ತಿರುವುದಕ್ಕೆ ತಾವು ಕೃತಜ್ಞರಾಗಿದ್ದು, ಕನ್ನಡ ಕಟ್ಟಿ ಬೆಳೆಸುವ ವಿಚಾರದಲ್ಲಿ ಎಂದಿಗೂ ಯಾರನ್ನಾದರೂ ಎದುರು ಹಾಕಿಕೊಂಡಾದರೂ ಕೆಲಸ ಮಾಡಲು ಸಿದ್ಧರಿರಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ, ಪ್ರಾಧ್ಯಾಪಕ ಮಲ್ಲೇಶಗೌಡ, ತಾಲೂಕು ಕಸಾಪ ಅಧ್ಯಕ್ಷ ಎಚ್.ಎನ್. ಲೋಕೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

