ಹಾಸನ

ಇಂದು ಜೆಡಿಎಸ್ ಕಾನೂನು ವಿಭಾಗದ ಸಭೆ

Published On :

ಹಾಸನ: ಜಿಲ್ಲಾ ಜೆಡಿಎಸ್ ಕಾನೂನು ವಿಭಾಗದ ಸಭೆಯು ಮಾ.1ರಂದು ಸಂಜೆ 4ಕ್ಕೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಪಟದಲ್ಲಿ ನಡೆಯಲಿದೆ. ಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ವರಿಷ್ಠ ಎಚ್.ಡಿ. ದೇವೇಗೌಡರು ಉದ್ಘಾಟಿಸಲಿದ್ದಾರೆ. ಸಭೆಯಲ್ಲಿ ಶಾಸಕರಾದ ಎಚ್.ಡಿ. ರೇವಣ್ಣ, ಎಚ್.ಎಸ್. ಪ್ರಕಾಶ್, ಎಚ್.ಕೆ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಪಂ ಅಧ್ಯಕ್ಷೆ ಅಂಬಿಕಾ ರಾಮಣ್ಣ, ಉಪಾಧ್ಯಕ್ಷ ಬಿಳಿಚೌಡಯ್ಯ, ನಗರಸಭೆ ಅಧ್ಯಕ್ಷೆ ವಿದ್ಯಾ, ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ಬಿ.ವಿ. ಕರೀಗೌಡ, ಜಿಲ್ಲಾಧ್ಯಕ್ಷ ಜಾವಗಲ್ ರಾಜಶೇಖರ್, ಕಾರ್ಯಾಧ್ಯಕ್ಷ ಚನ್ನವೀರಪ್ಪ, ಹಿರಿಯ ವಕೀಲ ಎಂ.ಜಿ.ದೊಡ್ಡೇಗೌಡ ಹಾಗೂ ಇತರರು ಭಾಗವಹಿಸಲಿದ್ದಾರೆಂದು ವಿಭಾಗದ ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದ್ದಾರೆ.
ಶಿವ ಕ್ರೆಡಿಡ್ ಕೋ ಆಪರೇಟಿವ್ ಸೊಸೈಟಿಗೆ ಆಯ್ಕೆ
ಅರಸೀಕೆರೆ: ಪಟ್ಟಣದ ಶಿವ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಸಾಧು ವೀರಶೈವ ಸಮಾಜದ ಮುಖಂಡ ಹಿರಿಯೂರು ರೇವಣ್ಣ ಅಧ್ಯಕ್ಷರಾಗಿ, ಎಂ.ಸಿ. ವಿರುಪಾಕ್ಷಪ್ಪ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷಗಾದಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 12 ಸದಸ್ಯ ಬಲದ ಸಂಘದಲ್ಲಿ ಯಾರೊಬ್ಬರು ನಾಮಪತ್ರ ಸಲ್ಲಿಸದ ಕಾರಣ ಈರ್ವರು ಅವಿರೋಧ ಆಯ್ಕೆಯಾಗಿದ್ದಾರೆ. ನಂತರ ಮಾತನಾಡಿದ ಅಧ್ಯಕ್ಷ, ಉಪಾಧ್ಯಕ್ಷರು ಸಂಘದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ. ದುರ್ಬಲರಿಗೆ ಆರ್ಥಿಕವಾಗಿ ಹಿಂದುಳಿದ ಸಾಧು ವೀರಶೈವ ಸಮಾಜದ ಜನರ ಕಲ್ಯಾಣಕ್ಕೆ ಕಂಕಣಬದ್ಧರಿರುವುದಾಗಿ ಘೋಷಿಸಿದರು.
ಇಂದ ವಿಶೇಷ ಉಪನ್ಯಾಸ
ಅರಸೀಕೆರೆ: ಪಟ್ಟಣದ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಭಾರತ್ ವಿಕಾಸ್ ಪರಿಷತ್ ಅಮರಗಿರಿ ಶಾಖೆ ವತಿಯಿಂದ ಅವಿಭಕ್ತ ಕುಟುಂಬದ ಹಿರಿಮೆ ಮತ್ತು ಭಾರತೀಯ ಕುಟುಂಬದ ಇಂದಿನ ಸವಾಲುಗಳ ಕುರಿತಂತೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಮಾ.1 ರಂದು ಸಂಜೆ 6ಕ್ಕೆ ಏರ್ಪಡಿಸಲಾಗಿದೆ. ಆರ್.ಎಸ್.ಎಸ್. ಕುಟುಂಬ ಪ್ರಭೋದನ್ ರಾಮಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪರಿಷತ್ ಅಧ್ಯಕ್ಷ ಬಿ.ಎಸ್. ಸೇತುರಾಂ, ವೈದ್ಯ ಪಿ.ಎನ್. ಜಗದೀಶ್ ಪಾಲ್ಗೊಳ್ಳಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದವರಿಗೆ ಉದ್ಯಮಿ ಅರುಣ್ ಕುಮಾರ್ ವಿತರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.