ಪುರಸಭೆ ಅಧಿಕಾರಿಗಳಿಗೆ ವಾಕಿಟಾಕಿ ವಿತರಣೆ
ಬೇಲೂರು: ಪುರಸಭೆ ಕಾರ್ಯಾಲಯದಲ್ಲಿ ಸಕಲೇಶಪುರ ಉಪವಿಭಾಗಾಧಿಕಾರಿ ಡಾ. ಮಧುಕೇಶ್ವರ್ ಬೇಲೂರು ಪುರಸಭೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ವಾಕಿಟಾಕಿ ವಿತರಿಸಿದರು.
ನಂತರ ಮಾತನಾಡಿ, ಇಲಾಖೆಯ ಕೆಲಸ ಕಾರ್ಯಗಳು ಸುಗಮವಾಗಿ ಹಾಗೂ ತುರ್ತಾಗಿ ನಿರ್ವಹಿಸಲು ಅನುಕೂಲವಾಗಲೆಂದು ವಾಕಿಟಾಕಿ ವಿತರಿಸಲಾಗಿದೆ ಎಂದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪುರಸಭೆಗೆ ಸೇರಿದ ಐಡಿಎಂಸಿ ಕಾಂಪ್ಲೆಕ್ಸ್‌ನ ಬಾಡಿಗೆ ಹಣ ಪಾವತಿಗೆ ಜನವರಿ 15ರವರೆಗೆ ಗಡುವು ನೀಡಲಾಗಿದೆ. ಆದಷ್ಟು ಬೇಗ ಬಾಡಿಗೆದಾರರು ಬಾಕಿ ಹಣವನ್ನು ಪಾವತಿಸಬೇಕಾಗಿ ಸೂಚಿಸಿದರು.
ಸೋಮವಾರ ನಡೆಯುವ ವಾರದ ಸಂತೆಯು ರಸ್ತೆ ಬದಿಯಲ್ಲಿ ನಡೆಯುತ್ತಿದೆ. ಆದ್ದರಿಂದ ಶಾಲಾ ಮಕ್ಕಳಿಗೆ ಹಾಗೂ ವಾಹನ ಸಂಚಾರಕ್ಕೆ ತುಂಬಾ ತೊಂದರೆ ಆಗುತ್ತಿರುವುದು ಕಂಡು ಬಂದಿದ್ದು ಆದಷ್ಟು ಬೇಗ ಸ್ಥಳೀಯ ಶಾಸಕರನ್ನು ಹಾಗೂ ಜಿಲ್ಲಾಧಿಕಾರಿಗಳನ್ನು ಕಂಡು ಈ ಸಮಸ್ಯೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

