ಹಾಸನ

ಜಿಲ್ಲಾದ್ಯಂತ ಹೊಸ ವರ್ಷಕೆ ಹರ್ಷದ ಸ್ವಾಗತ

Published On :

ಕ.ಪ್ರ. ವಾರ್ತೆ  ಹಾಸನ  ಜ. 1
ಹೊಸ ವರ್ಷವನ್ನು ಜಿಲ್ಲಾದ್ಯಂತ ಮಂಗಳವಾರ ಮಧ್ಯರಾತ್ರಿ ಜನತೆ ಜನತೆ ಸಡಗರ, ಸಂಭ್ರಮದಿಂದ ಬರ ಮಾಡಿಕೊಂಡರು.
ನಗರದ ನಾನಾ ಕಡೆಗಳಲ್ಲಿ ಹೊಸ ವರ್ಷದ ಅಂಗವಾಗಿ ನಡೆದ ಮನರಂಜನಾ ಕಾರ್ಯಕ್ರಮದಲ್ಲಿ ಹಾಡುಗಳಿಗೆ ಚಿಣ್ಣರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಮಕ್ಕಳ ನೃತ್ಯವನ್ನು ಪೋಷಕರು ಕಣ್ತುಂಬಿಕೊಂಡು ಸಂಭ್ರಮಪಟ್ಟರು. ಇನ್ನು ದಂಪತಿಗಳು, ವೃದ್ಧರು ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕಿ, ಖುಷಿಯಲ್ಲಿ ತೇಲಾಡಿದರು. ಉಳಿದಂತೆ ಹೊಸ ವರ್ಷ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಟುಂಬಗಳಿಗೆ ನಾನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲೆಯಲ್ಲೂ ಹೊಸ ವರ್ಷ ಆಚರಣೆ ಸಂಭ್ರಮ ಮೀರಿತ್ತು. ಪ್ರಮುಖ ಹೊಟೇಲ್, ಕ್ಲಬ್, ರೆಸಾರ್ಟ್ ಹಾಗೂ ಡಾಬಾಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಾಡು, ಕುಣಿತದ ಮೂಲಕ 2014ನ್ನು ಮಂಗಳವಾರ ಬರ ಮಾಡಿಕೊಳ್ಳಲಾಯಿತು.
ಮಧ್ಯರಾತ್ರಿ 12 ಗಂಟೆ ಆಗುತ್ತಿದ್ದಂತೆಯೇ ಒಟ್ಟಾಗಿ ಸೇರಿದ್ದ ಎಲ್ಲರೂ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಚಿಯರ್ಸ್ ಹೇಳಿದರು. ಬಗೆಬಗೆಯ ಪಟಾಕಿಗಳು ಬಾನಂಗಳದಲ್ಲಿ ಚಿತ್ತಾರ ಬಿಡಿಸಿದವು.
ಕೆಲವು ಕಡೆ ಕೇಕ್ ಕತ್ತರಿಗೆ ಹೊಸ ವರ್ಷ ಆಚರಿಸಿದರು. ಕ್ರಿಸಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಇರುವುದರಿಂದ ಮಕ್ಕಳ ಸಂಭ್ರಮ ಹೇಳತೀರದು.
ಹೊಸವರ್ಷವನ್ನು ಹಬ್ಬದಂತೆ ಆಚರಿಸಿ, ಹೊಸ ಹರುಷ ತರಲಿ ಎಂದು ಬಂಧು ಬಳಗಕ್ಕೆ, ಸ್ನೇಹಿತರಿಗೆ ಪರಿಸ್ಪರ ಶುಭಾಶಯ ವಿನಿಮಯ ಮಾಡಿದರು.
ಚನ್ನರಾಯಪಟ್ಟಣ, ಆಲೂರು, ಬೇಲೂರು, ಹೊಳೆನರಸೀಪುರ ಮತ್ತು ಚನ್ನರಾಯಪಟ್ಟಣ ತಾಲೂಕುಗಳಲ್ಲೂ ಹೊಸ ವರುಷವನ್ನು ಪ್ರೀತಿ, ವಾತ್ಸಲ್ಯದಿಂದ ಬರ ಮಾಡಿಕೊಳ್ಳಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.