ಪೊಲೀಸ್ ಸರ್ಕಲ್
ಪಾದಚಾರಿ ಸಾವು
ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಮಾಡಿದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂಧ್ರ ಪ್ರದೇಶದ ನಂಚರ್ಲ ಗ್ರಾಮದ ವಾಸಿ ಚಿನ್ನಲಾಲಪ್ಪ (55) ಸಾವನ್ನಪ್ಪಿದ ದುರ್ದೈವಿ.
ಚಿನ್ನಲಾಲಪ್ಪ ರವರು ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಹೋಬಛಳಿ, ಗೆಜ್ಜರಾರನಹಳ್ಳಿ ಬಳಿ ಇರುವ ನೈರುತ್ಯ ರೇಲ್ವೇ ಕ್ಯಾಂಪಿನ ಬಳಿ ಬ್ರಿಡ್ಜ್ ನಿರ್ಮಾಣದ ಕೆಲಸ ಮಾಡಿಕೊಂಡಿದ್ದು, ಕಳೆದ ಡಿ. 30ರಂದು ತಮ್ಮ ಊರಿಗೆ ಹೋಗಲು ಕತ್ತರಿಘಟ್ಟ ಗೇಟ್ ಎನ್ಎಚ್-75 ಹತ್ತಿರ ರಸ್ತೆಯನ್ನು ದಾಟುತ್ತಿದ್ದರು. ಆಗ, ಬಸ್ ಚಾಲಕನ ನಿರ್ಲಕ್ಷ್ಯತೆಯಿಂದ ಅವರು ಅಪಘಾತಕ್ಕೀಡಾಗಿದ್ದಾರೆ. ತೀವ್ರ ಸ್ವರೂಪದ ಗಾಯಕ್ಕೊಳಗಾಗಿರುವ ಅವರನ್ನು ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮೃತರ ಪುತ್ರ ನಾಗಲಿಂಗ ಅವರು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಮನೆಗಳ್ಳನ ಬಂಧನ
ಹಾಸನ: ಮನೆಗಳ್ಳನೊಬ್ಬನನ್ನು ಬಂಧಿಸಿದ್ದು, ಆತನಿಂದ ರು. 2.60 ಲಕ್ಷ ಬೆಲೆಯ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಪೊಲೀಸ್ ಅಧೀಕ್ಷಕ ರವಿ ಡಿ. ಚನ್ನಣ್ಣನವರ್ ಮಾರ್ಗದರ್ಶನದ ಮೇರೆಗೆ ಡಿವೈಎಸ್ಪಿ ಪರಮೇಶ್ ಎಚ್. ಭೀಮಕ್ಕನವರ್ ಅವರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಿ ಬುಧವಾರ ಹಾಸನ ತಾಲ್ಲೂಕು ಬೈಲಹಳ್ಳಿ ಗ್ರಾಮದ ಬಸ್ನಿಲ್ದಾಣದ ಬಳಿ ವಸಂತ್ (30) ಅನುಮಾನಸ್ಪದವಾಗಿ ಓಡುತ್ತಿದ್ದವನನ್ನು ಹಿಡಿದು ವಿಚಾರಣೆ ನಡೆಸಿದಾಗ ಕಳ್ಳತನ ಬಯಲಾಗಿದೆ.
ಹಾಸನ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ 3 ಪ್ರಕರಣಗಳಲ್ಲಿ ಸುಮಾರು ರು. 2,60,00 ಬೆಲೆಯ ರು. 92,880 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೃಹಿಣಿ ನಾಪತ್ತೆ
ಹಾಸನ: ಹೊಳೆನರಸೀಪುರ ಪಟ್ಟಣದ ಅಂಬೇಡ್ಕರ್ ನಗರ ವಾಸಿ ಪರಮೇಶ ರವರ ಪತ್ನಿ ಮಮತ (29) ಮನೆಯಿಂದ ಹೊರಗೆ ಹೋದವರು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಚಹರೆ: ಎಣ್ಣೆಗೆಂಪು ಬಣ್ಣ, ಕನ್ನಡ ಬಾಷೆ ಮಾತನಾಡುತ್ತಾರೆ. ಪತಿ ಪರಮೇಶ, ಹೊಳೇನರಸೀಪುರ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

