ಹಾಸನ

5ಕ್ಕೆ ಮಡಿವಾಳರ ಜಾಗೃತಿ ಸಮಾವೇಶ

Published On :

ಕ.ಪ್ರ.ವಾರ್ತೆ  ಹಾಸನ  ಜ. 2
ರಾಜ್ಯ ಮಡಿವಾಳರ ಜಾಗೃತಿ ಸಮಾವೇಶವನ್ನು ಜ. 5ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಜಿಲ್ಲಾ ಮಡಿವಾಳ ಮಾಚಿದೇವ ಮಹಾಜನ ಸೇವಾ ಸಂಘದ ಕಾರ್ಯಾಧ್ಯಕ್ಷ ಹನುಮಂತಶೆಟ್ಟಿ ತಿಳಿಸಿದರು.
ಮುಖ್ಯಮಂತ್ರಿ ಭಾಗಿ: ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಡಿವಾಳ ಜನಾಂಗವನ್ನು ರಾಷ್ಟ್ರದ ಇತರೆ 17 ರಾಜ್ಯಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿಸುವಂತೆ ರಾಜ್ಯದಲ್ಲಿಯು ಸಹ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದರು.
ಬೇಡಿಕೆ ಈಡೇರಿಸಲು ಒತ್ತಾಯ: ಕುಲಗುರುವಾದ ಶ್ರೀಮಡಿವಾಳ ಮಾಚಿ ದೇವರ ಜನ್ಮದಿನವನ್ನು ಪರಿಗಣಿಸಿ ಸಂವಿಧಾನಾತ್ಮಕವಾಗಿ ಮಾಚಿದೇವ ಜಯಂತಿ ಘೋಷಿಸಬೇಕು. ಶ್ರೀಮಡಿವಾಳ ಮಾಚಿದೇವರ ಜನಸ್ಥಳವಾದ ಬಿಜಾಪುರದಲ್ಲಿ ಸಿಂಧಗಿ ತಾಲೂಕು, ದೇವರ ಹಿಪ್ಪರಿಗೆಯನ್ನು ಅಭಿವೃದ್ಧಿ ಪಡಿಸಿ, ಜನ್ಮಸ್ಥಳ ನಿರ್ವಹಣೆಗೆ ಪ್ರತ್ಯೇಕವಾದ ಮಾಚಿದೇವ ಪ್ರಾಧಿಕಾರ ರಚನೆ, ಶ್ರೀಮಾಚಿದೇವ ಅಧ್ಯಯನ ಪೀಠ ಸ್ಥಾಪಿಸುವಂತೆ ಒತ್ತಾಯಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುವುದಾಗಿ ಹೇಳಿದರು.
ಜಿಲ್ಲೆಯಿಂದ ಸುಮಾರು ನಾಲ್ಕರಿಂದ ಐದು ಸಾವಿರ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎ.ಎಸ್.ಈಶ್ವರ್, ಎಚ್.ಎನ್.ಮಲ್ಲೇಶ್, ನಾಗಪ್ಪ, ವೆಂಕಟೇಶ್, ರಾಮಶೆಟ್ಟಿ, ಭದ್ರಪ್ಪ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.