'ಕುವೆಂಪು ಜನ್ಮ ದಿನಾಚರಣೆ ಸುದೈವ'
ಹೊಳೆನರಸೀಪುರ: ರಾಷ್ಟ್ರಕವಿ ಕುವೆಂಪು ಅವರ 109 ನೇ ಜನ್ಮ ದಿನಾಚರಣೆ ಆಚರಿಸುತ್ತಿರುವುದು ಸುದೈವ ಎಂದು ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ತಿಳಿಸಿದರು.
ಪಟ್ಟಣದ ಕೋಟೆ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ತಾಲೂಕು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಇತ್ತೀಚೆಗೆ ಆಯೋಜಿಸಿದ್ದ ಕುವೆಂಪು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಕುವೆಂಪು ಅವರ ವಿಚಾರಧಾರೆಯನ್ನು ಶಾಲಾ ಮಕ್ಕಳು ಅನುಸರಿಸುವಂತೆ ಮಾಡುತ್ತಿರುವ ಕೆಲಸ ಅತ್ಯಮೋಘ.
ಜೊತೆಗೆ ಈ ಸಂದರ್ಭದಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಿ ಸೇವೆ ಸಲ್ಲಿಸಿರುವ ಮಹನೀಯರುಗಳನ್ನು ಗೌರವಿಸಿ, ಸನ್ಮಾನಿಸುತ್ತಿರುವ ರೀತಿ ಉತ್ತಮ ಎಂದು ಪ್ರಶಂಶಿಸಿದರು.
ಸಮಾರಂಭದಲ್ಲಿ ನಗರಠಾಣೆ ಪಿಎಸ್ಐ ಶಿವಕುಮಾರ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕುಮಾರ್, ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಉಮೇಶ್, ಟಿ.ಕೆ. ಧರ್ಮರಾಜು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ತಾಲೂಕು ಬಿಜಿವೈಎಸ್ ಸಮಿತಿ ಅಧ್ಯಕ್ಷ ಉಮೇಶ್ ಮಾತನಾಡಿ, ತಾಲೂಕು ಜ್ಞಾನ ವಿಜ್ಞಾನ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಿಕ್ಷಕ ದಿವಾಕರ್ ಅವರಿಗೆ ಶುಭ ಹಾರೈಸಿದರು. ಸಮಾರಂಭ ಆರಂಭಕ್ಕೆ ಮುನ್ನ ಕುವೆಂಪು ಅವರ 109ನೇ ಜನ್ಮ ದಿನಾಚರಣೆ ಪ್ರಯುಕ್ತ 109 ವಿದ್ಯಾರ್ಥಿನಿಯರ ಪ್ರಾರ್ಥನೆ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. ಕಾರ್ಯಕ್ರಮವನ್ನು ಶಿಕ್ಷಕ ರೇವಣ್ಣಚಾರ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

