ಹಾಸನ

ಶಾಂತಿ ಗ್ರಾಮದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತ್ಯುತ್ಸವ

Published On :

ಹಾಸನ: ಯುದ್ಧ ಮತ್ತು ರೋಗಗಳಿಂದ ಸತ್ತವರಿಗಿಂತ ಮತ, ಧರ್ಮಕ್ಕಾಗಿ ಹೋರಾಡಿ ಮಡಿದವರ ಸಂಖ್ಯೆಯೇ ಪ್ರಪಂಚದಲ್ಲಿ ಹೆಚ್ಚಾಗಿದೆ ಎಂದು ಕುವೆಂಪು ಒಡನಾಡಿ ಹಾಗೂ ನಿವೃತ್ತ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ಅತ್ತಿಹಳ್ಳಿ ದಾಸೇಗೌಡ ವಿಷಾದಿಸಿದರು.
ಅವರು  ಶಾಂತಿಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಳೀಯ ಗ್ರಾಮ ಸಂಸ್ಕತಿ ಅಧ್ಯಯನ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಕುವೆಂಪು ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಸಾಹಿತಿ ಗೊರೂರು ಅನಂತರಾಜು ಅವರು ಕುವೆಂಪು ಕುರಿತಂತೆ ಸ್ವರಚಿತ ಕವಿತೆಯನ್ನು ವಾಚಿಸಿದರು. ಕಾಲೇಜಿನ ಪ್ರಾಚಾರ್ಯ ಪಾಪಣ್ಣ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಇದ್ದರು.
ಗ್ರಾಮ ಸಂಸ್ಕೃತಿ ಅಧ್ಯಯನ ಕೇಂದ್ರದ ಬೋರೇಗೌಡ, ತಿಮ್ಮಪ್ಪ, ಸೋಮಶೇಖರ್, ಗಣೇಶ್, ನಾಗಣ್ಣ ಮತ್ತು ಉಪನ್ಯಾಸಕಿ ಚಂಪಕ ಇದ್ದರು. ಗ್ರಾಮ ಸಂಸ್ಕೃತಿ ಆಧ್ಯಯನ ಕೇಂದ್ರದ ಕಾರ್ಯದರ್ಶಿ ಶಾಂತಿಗ್ರಾಮ ರಾಜಶೇಖರ್ ಸ್ವಾಗತಿಸಿ, ನಿವೃತ್ತ ಸೈನಿಕರಾದ ರಂಗಪ್ಪ  ವಂದಿಸಿದರು. ಹಿರಿಯ ಉಪನ್ಯಾಸಕಿ ಶ್ರೀಮತಿ ಜಯಶೀಲ ಪ್ರಾರ್ಥಿಸಿದರು. ಉಪನ್ಯಾಸಕ ಗಿರೀಶ್ ನಿರೂಪಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.