ಸಾಹಿತ್ಯ ಸಮ್ಮೇಳನದಲ್ಲಿ ಬಾ.ರಾ.ಸುಬ್ಬರಾಯರಿಗೆ ಸನ್ಮಾನ
ಕ.ಪ್ರ.ವಾರ್ತೆ ಹೊಳೆನರಸೀಪುರ ಜ.2
80ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಜ. 7, 8, 9 ರಂದು ಮೂರು ದಿನಗಳ ಕಾಲ ವಿದ್ವಾಂಸರಾದ ಡಾ.ನಾ.ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬದುಕಿನ ನಾನಾ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ಕನ್ನಡ ನಾಡು- ನುಡಿಗಾಗಿ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಗೌರವಿಸುವ ಪರಂಪರೆಯನ್ನು ಪರಿಷತ್ತು ಪಾಲಿಸಿಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಜ. 9ರಂದು ಹೊಳೆನರಸೀಪುರದ ಬಹುಮುಖ ಪ್ರತಿಭಾನ್ವಿತರು ಕನ್ನಡನಾಡು- ನುಡಿಗಾಗಿ ಶ್ರಮಿಸುತ್ತಿರುವ ಬಾ.ರಾ. ಸುಬ್ಬರಾಯರನ್ನು ಈ ಸಮ್ಮೇಳನದಲ್ಲಿ ಸನ್ಮಾನಿಸಲಾಗುವುದು. ವಿಶ್ರಾಂತ ಕುಲಪತಿ ಡಾ.ದೇ. ಜವರೇಗೌಡ, ಕಸಾಪ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿವಿ ಕುಲಪತಿ ಡಾ. ಶಿವಶಂಕರಮೂರ್ತಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎಂ. ನಾಗರಾಜ್ ಭಾಗವಹಿಸುವರು.
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ಹಾಸನ: ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತನ 2013-14, ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ ,ನವದೆಹಲಿ ಇವರು 2013-14ನೇ ಸಾಲಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವೇತನ ನೀಡಲು ಅರ್ಹ ಪರಿಶಿಷ್ಠ ಜಾತಿ, ಪಂಗಡದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಪೂರ್ಣಕಾಲಿಕವಾಗಿ 2013-14ನೇ ಸಾಲಿಗೆ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ಗಳಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆದಿರಬೇಕು ಮತ್ತು ಪರಿಶಿಷ್ಟ ಜಾತಿ, ಪಂಗಡದವರಾಗಿರಬೇಕು. ಅರ್ಜಿ ಸಲ್ಲಿಸಲು ಜ.16 ಕೊನೆ ದಿನ. ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪ ಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಇವರನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ 0821-2516844, ಮೊಬೈಲ್ ಸಂಖ್ಯೆ. 9449686641 ಎಂದು ಸಂಸ್ಥೆಯ ಮುಖ್ಯಸ್ಥ ಎ. ವೆಂಕಟೇಶಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

