ಹಾಸನ

ಕ್ಯಾನ್ಸರ್ ಪೀಡಿತ ಪತಿಗೆ ನೆರವು ನೀಡಲು ಮನವಿ

Published On :

ಕನ್ನಡಪ್ರಭ ವಾರ್ತೆ, ಹಾಸನ, ಜ. 3
ಕ್ಯಾನ್ಸರ್‌ನಿಂದ ಬಳಲುತ್ತಿರುವ ಪತಿ ಚಿಕಿತ್ಸೆಗೆ ಆರ್ಥಿಕ ಸಹಾಯ ಮಾಡುವಂತೆ ಪತ್ನಿ ಪ್ರಭಾವತಿ ಮನವಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲೂರು ತಾಲೂಕಿನ ಹೊತನಹಳ್ಳಿಪುರ ಗ್ರಾಮದ ವಾಸಿಯಾಗಿರುವ ನಾವು ಕಳೆದ 2 ವರ್ಷಗಳಿಂದ ಪತಿ ಪರಮೇಶ್‌ಗೆ ಕ್ಯಾನ್ಸರ್ ರೋಗ ಕಾಣಿಸಿಕೊಂಡಿದೆ. ಇದರಿಂದ ಇವರ ದೇಹದಲ್ಲಿ ಬಿಳಿ ಹಾಗೂ ಕೆಂಪು ರಕ್ತಕಣಗಳ ಉತ್ಪತ್ತಿ ಸಂಪೂರ್ಣವಾಗಿ ನಿಂತು ಹೋಗಿದೆ. ತಿಂಗಳಿಗೊಮ್ಮೆ ರಕ್ತವನ್ನು ಇವರಿಗೆ ಕೊಡಿಸಲು ಸಾಧ್ಯವಾಗುತ್ತಿಲ್ಲ ಎಂದು ಅಲವತ್ತುಕೊಂಡರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರು. 5ರಿಂದ 6 ಲಕ್ಷ ವೆಚ್ಚ ಆಗಲಿದ್ದು, ಆದಕ್ಕಾಗಿ ಆರ್ಥಿಕ ಸಹಾಯ ಮಾಡುವವರು ಪ್ರಭಾವತಿ, ಕರ್ನಾಟಕ ಬ್ಯಾಂಕ್ ಆಲೂರು ಬ್ರಾಂಚ್, ನಂ. 3262500100436601ಗೆ ಹಣ ಪಾವತಿಸಬಹುದಾಗಿದೆ ಎಂದು ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ ಮೊ. ಸಂಖ್ಯೆ. 9535768169 ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.