ಮುಳುಗಿದ್ದ ವಿದ್ಯಾರ್ಥಿ ಶವ ಪತ್ತೆ
ಹಾಸನ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಇಲ್ಲಿನ ಹೇಮಾವತಿ ನದಿಯಲ್ಲಿ ಈಜಲು ಹೋಗಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಯ ಶವ ಶುಕ್ರವಾರ ಪತ್ತೆಯಾಗಿದೆ.
ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾಸನದ ಸಿದ್ದಯ್ಯ ನಗರದ ಶಂಕರಪ್ಪ ಎಂಬುವವರ ಪುತ್ರ ಶ್ರೀಕಾಂತ್ (20) ಗುರುವಾರ ತನ್ನ ಸ್ನೇಹಿತರೊಂದಿಗೆ ಹೇಮಾವತಿ ನದಿಯಲ್ಲಿ ಈಜಲು ಹೋಗಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದ. ಈತನ ಜೊತೆಗಿದ್ದ ನಾಲ್ವರು ವಿದ್ಯಾರ್ಥಿಗಳು ದಡದಲ್ಲಿ ಈಜುತ್ತಿದ್ದ ಸಮಯದಲ್ಲಿ ನದಿಯ ಮಧ್ಯದಲ್ಲಿನ ಆಳವಾದ ಸ್ಥಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾಗಿ ಜೊತೆಗಿದ್ದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದರು.
ಗುರುವಾರ ಸಂಜೆಯವರೆಗೂ ಪೊಲೀಸರು ಇಲ್ಲಿನ ಅಗ್ನಿಶಾಮಕ ಸಿಬ್ಬಂಗಳೊಂದಿಗೆ ಹರಸಾಹಸ ಪಟ್ಟರೂ ಶ್ರೀಕಾಂತ್ನ ಮೃತ ದೇಹ ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ನಂತರ ಪೊಲೀಸರು ಶುಕ್ರವಾರ ಬೆಳಿಗ್ಗೆ ಬೇರೆಡೆಯಿಂದ ನುರಿತ ಈಜುಗಾರರನ್ನು ಕರೆಸಿ ವಿದ್ಯಾರ್ಥಿಯು ಮುಳುಗಿ ಮೃತಪಟ್ಟಿದ್ದ ಸ್ಥಳದಲ್ಲಿ ತೀವ್ರ ಹುಡುಕಾಟ ನಡೆಸಿ, ಶುಕ್ರವಾರ ವಿದ್ಯಾರ್ಥಿಯ ಮೃತದೇಹ ಹೊರತೆಗೆಯುವಲ್ಲಿ ಯಶಸ್ವಿಯಾದರು.
ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆದ ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ನಗರಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ಮರಣೋತ್ತರ ಪರೀಕ್ಷೆಯ ನಂತರ ವಿದ್ಯಾರ್ಥಿ ಶ್ರೀಕಾಂತನ ಮೃತದೇಹವನ್ನು ಪೋಷಕರಿಗೆ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಕೃಷ್ಣಪ್ಪ, ನಗರ ಠಾಣೆ ಎಸ್ಐ ಶಿವಕುಮಾರ್ ಸ್ಥಳದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

