ಸುದ್ದಿ ಸಂಕ್ಷೇಪ
ಅಡ್ಲಿಮನೆ ರಸ್ತೆ ಬಳಿ ಕನ್ನಡ ರಾಜ್ಯೋತ್ಸವ
ಹಾಸನ: ನಗರದ ಅಡ್ಲಿಮನೆ ರಸ್ತೆ ಬಳಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು. ಸಮಾರಂಭವನ್ನು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಉದ್ಘಾಟಿಸಿ ಮಾತನಾಡಿ, ಕನ್ನಡ ನಾಡು-ನುಡಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು ಯಾವ ಸಂದರ್ಭದಲ್ಲೂ ಧಕ್ಕೆ ಬಂದಾಗ ನಮ್ಮ ಸಂಘಟನೆ ಹೋರಾಟ ಮಾಡಲು ಸದಾ ಸಿದ್ಧವಾಗಿರುತ್ತದೆ. ಇಂತಹ ಕಾರ್ಯಕ್ರಮದ ಮೂಲಕ ಜನರಲ್ಲಿ ಕನ್ನಡದ ಬಗ್ಗೆ ಅಭಿಮಾನ ಮೂಡಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ, ಅಡ್ಲಿಮನೆ ರಸ್ತೆ ಕರವೇ ಘಟಕವನ್ನು ಉದ್ಘಾಟಿಸಿದರು. ಶಾಸಕ ಹೆಚ್.ಎಸ್. ಪ್ರಕಾಶ್, ಕಾಂಗ್ರೆಸ್ ಮುಖಂಡ ದೇವರಾಜ್, ಕರವೇ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಹಾಗೂ ಇತರರು ಇದ್ದರು.
ನಾಳೆ ಮಾಜಿ ಸೈನಿಕರ ಸಭೆ
ಅರಸೀಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜ.5ರಂದು ಬೆಳಗ್ಗೆ 10.30ಕ್ಕೆ ಮಾಜಿ ಸೈನಿಕರ ಸಭೆಯನ್ನು ಕರೆಯಲಾಗಿದೆ. ತಾಲೂಕಿನ ಎಲ್ಲಾ ಮಾಜಿ ಸೈನಿಕರು ಹಾಗೂ ಕುಟುಂಬದವರು ತಪ್ಪದೇ ಹಾಜರಾಗಬೇಕೆಂದು ಅಧ್ಯಕ್ಷ ವರದಕೃಷ್ಣ ಹಾಗೂ ಕಾರ್ಯದರ್ಶಿ ನಾಗಭೂಷಣ್ ಮನವಿ ಮಾಡಿದ್ದಾರೆ. ಈ ಸಭೆಯಲ್ಲಿ ಮಾಜಿ ಸೈನಿಕರ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಲಾಗುವುದಲ್ಲದೆ ಸೈನಿಕರ ದಿನಾಚರಣೆಯ ಆಚರಣೆ ಹಾಗೂ ದಿನಾಂಕ ನಿಗದಿಯ ಬಗ್ಗೆ ಚರ್ಚಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಪೂರಕ ಪರೀಕ್ಷೆ ಫಲಿತಾಂಶ
ಹಾಸನ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನವೆಂಬರ್-2013ರಲ್ಲಿ ನಡೆದ ಬಿ.ಎ., ಬಿ.ಕಾಂ ಪದವಿಯ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಇದರ ಸದುಪಯೋಗವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ, ದೂ.ಸಂ. 08172-269244 ಇಲ್ಲಿಗೆ ಸಂಪರ್ಕಿಸಬಹುದು ದಲಿತರ ಮೇಲಿನ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

