ಹಾಸನ

ಸಂಚಾರ ಸುರಕ್ಷತೆ ಬಗ್ಗೆ ಅರಿವು ಪಡೆದುಕೊಳ್ಳಿ

Published On :

ಕ.ಪ್ರ.ವಾರ್ತೆ  ಬೇಲೂರು  ಜ.5
ವಾಹನ ಚಾಲಕರು ಹಾಗೂ ಸಾರ್ವಜನಿಕರು ರಸ್ತೆ ಸಂಚಾರ ಮತ್ತು ಸುರಕ್ಷತೆ ಬಗ್ಗೆ ಮಾಹಿತಿ ತಿಳಿಯುವುದು ಅಗತ್ಯ ಎಂದು ಆರಕ್ಷಕ ವೃತ್ತ ನಿರೀಕ್ಷಕ ಕೆ.ಎಲ್. ಗಣೇಶ್ ತಿಳಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪೊಲೀಸ್ ಇಲಾಖೆ ಸರ್ಕಾರಿ ಪದವಿ ಪೂರ್ವ ಕಾಲೇಜ್  ವಿದ್ಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ರಸ್ತೆ ಸಂಚಾರ ಮತ್ತು ಸುರಕ್ಷತೆ ಜಾಥವನ್ನು ಉಧ್ಘಾಟಿಸಿ ಮಾತನಾಡಿದರು.
ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆ ಚಲಿಸುವಾಗ ರಸ್ತೆಯ ಎಡಬದಿಯಲ್ಲೇ ಚಲಿಸಬೇಕು. ಚಾಲಕರು ಚಾಲನಾ ಪರವಾನಗಿ ಹೊಂದಿರಬೇಕು. ವಾಹನ ಮಾಲೀಕರು, ವಾಹನದ ದಾಖಲಾತಿ ಹಾಗೂ ಇನ್ಷೂರೆನ್ಸ್ ಹೊಂದಿರಬೇಕು. ಚಾಲಕರು ನಿಯಮಿತ ವೇಗದಲ್ಲಿ ವಾಹನ ಚಾಲನೆ ಮಾಡುವುದು,ಪೊಲೀಸ್ ಚೆಕ್ ಪೋಸ್ಟ್‌ಗಳಲ್ಲಿ ಚಾಲಕರು ವಾಹನ ದಾಖಲಾತಿ ಹಾಗೂ ಪರವಾನಗಿ ತೋರಿಸುವುದು, ವಾಹನ ಮಾಲೀಕರು ತಮ್ಮ ವಾಹನಗಳನ್ನು ಬೇರಯವರಿಗೆ ಕೊಡಬಾರದು,ವಾಹನಗಳನ್ನು ಪಾರ್ಕಿಂಗ್ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸುವುದು ಹಾಗೂ ಇನ್ನಿತರೆ ನಿಯಮಗಳನ್ನು ಪರಿಪೂರ್ಣವಾಗಿ ಪಾಲನೆ ಮಾಡುವಂತೆ ತಿಳಿಸಿದರು.
ಸಾರ್ವಜನಿಕರು ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಸಹಕರಿಸಿ, ಪೊಲೀಸರ ಸಲಹೆ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಿ.ಎಸ್.ಐ. ಅಶ್ವಿನ್ ಕುಮಾರ್, ಎ.ಎಸ್.ಐ. ರಾಜಶೇಖರ್, ಪೊಲೀಸರಾದ ನಂದಿಶ್, ಧರ್ಮೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.