ಸುದ್ದಿ ಸಂಕ್ಷೇಪ
ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆ
ಹೊಳೆನರಸೀಪುರ: ತಾಲೂಕಿನ ಹಳೇಕೋಟೆ ಹೋಬಳಿಯ ಅತ್ತಿಚೌಡೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕರಾದ ಪುಟ್ಟರಾಜು ಅವರು ಭಾರತ ಸಿವಿಲ್ ಸರ್ವಿಸ್ ನೌಕರರಿಗಾಗಿ ಜ.14, 15, 16ರಂದು ಮಹಾರಾಷ್ಟ್ರದ ಸಾವಂತವಾಡಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಹಾಸನ ಜಿಲ್ಲೆಯಿಂದ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಇವರನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಎನ್.ಕಾಂತರಾಜ್, ಸಹ ಶಿಕ್ಷಕರು, ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಸಹಾಯ ಮಾಡಿ
ಆಲೂರು: ಪರಮಶಿವ (38) ಎಂಬವರು ಕಳೆದ 2 ವರ್ಷಗಳಿಂದ ಬ್ಲಡ್ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು, ಚಿಕಿತ್ಸೆಗೆ ಧನಸಹಾಯ ಮಾಡಬೇಕೆಂದು ಪರಮಶಿವ ಅವರ ಪತ್ನಿ ಪ್ರಭಾ ಮನವಿ ಮಾಡಿದ್ದಾರೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಿದೆ. 2 ಲಕ್ಷ ವೆಚ್ಚವಾಗಿದೆ. ಇನ್ನೂ 6ರಿಂದ 7 ಲಕ್ಷ ಅವಶ್ಯಕತೆ ಇದೆ. ಕೌಟುಂಬಿಕ ನಿರ್ವಹಣೆ ಜತೆಗೆ ಇಷ್ಟು ಮೊತ್ತ ನೀಡಿ ಚಿಕಿತ್ಸೆ ಕೊಡಿಸಲು ಸಾಧ್ಯವಾಗುತ್ತಿಲ್ಲ. ಸಹಾಯ ಮಾಡುವವರು ಕರ್ನಾಟಕ ಬ್ಯಾಂಕ್ ಆಲೂರು, ಖಾತೆ ಸಂಖ್ಯೆ- 3262500100436601 ಹಣ ಜಮಾ ಮಾಡಬಹುದು ಅಥವಾ ಮೊ. 9535768169ಗೆ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

