ರಸ್ತೆ ಗುಂಡಿ ಮುಚ್ಚುವಲ್ಲಿ ಶಾಸಕರು ವಿಫಲ: ಆರೋಪ
ಬೇಲೂರು: ಪ್ರವಾಸಿ ಕೇಂದ್ರವಾದ ಬೇಲೂರು ಪಟ್ಟಣದ ಮುಖ್ಯ ರಸ್ತೆ ಅಗಲೀಕರಣಗೊಳಿಸುವಲ್ಲಿ ಹಾಗೂ ರಸ್ತೆ ಗುಂಡಿ ಮುಚ್ಚುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ತಾಲೂಕು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಐ.ಎನ್. ಅರುಣ್ ಕುಮಾರ್ ಆರೋಪಿಸಿದ್ದಾರೆ.
ದೂರು: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಜಯ ಕರ್ನಾಟಕ ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪಟ್ಟಣಕ್ಕೆ ಪ್ರತಿದಿನ ದೇಶವಿದೇಶದಿಂದ ಸಾವಿರಾರು ಪ್ರವಾಸಿಗರು ಅಗಮಿಸುತ್ತಾರೆ. ಅದರೆ ಪಟ್ಟಣದ ಮುಖ್ಯ ರಸ್ತೆ ಗುಂಡಿಬಿದ್ದು ವಾಹನಗಳ ಸಂಚರಕ್ಕೆ ಅಡಚಣೆ ಉಂಟಾಗಿದ್ದರೂ, ಶಾಸಕ ವೈ.ಎನ್. ರುದ್ರೇಶಗೌಡ ಈ ಬಗ್ಗೆ ಗಮನಹರಿಸಿದೇ ಇರುವುದು ವಿಪರ್ಯಾಸವಾಗಿದೆ ಎಂದು ಆರೋಪಿಸಿದರಲ್ಲದೇ, ಮುಖ್ಯ ರಸ್ತೆ ಅಗಲೀಕರಣ ಮಾಡುವಲ್ಲಿ ಮುಖ್ಯ ರಸ್ತೆ ಅಂಗಡಿ ಮಾಲೀಕರೊಂದಿಗೆ ಶಾಮಿಲಾಗಿದ್ದಾರೆ. ಅಗಲೀಕರಣಕ್ಕೆ ಹಿನ್ನೆಡೆ ಉಂಟಾಗಿದೆ ಎಂದು ಅವರು ದೂರಿದ್ದಾರೆ. ಹೆದ್ದಾರಿ ಎಂಜಿನಿಯರ್ಗಳು ರಸ್ತೆಯ ಎರಡು ಬದಿಗಳಲ್ಲಿ ಬಣ್ಣದ ಗುರುತು ಮಡಿ ವರ್ಷವೇ ಕಳೆದಿದೆ. ಆದರೂ, ಅವರ್ಯಾರೂ ಇತ್ತ ತಿರುಗಿ ನೋಡಿಲ್ಲ ಎಂದು ಅವರು ದೂರಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸೋಮೇಶ್, ತಾಲೂಕು ಗೌರವ ಅಧ್ಯಕ್ಷ ವಿ.ಎಸ್.ಬೋಜೇಗೌಡ, ನಗರ ಅಧ್ಯಕ್ಷ ಬಿ.ಎಲ್. ಲಕ್ಷ್ಮಣ್ ಹಾಗೂ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

