ಸಂಘಟನೆ, ಸಹಕಾರದಿಂದ ಸಮಾಜದ ಅಭಿವೃದ್ಧಿ
ಕ.ಪ್ರ.ವಾರ್ತೆ , ಹೊಳೆನರಸೀಪುರ , ಜ.7
ಯಾವುದೇ ಒಂದು ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಸಂಘಟನೆ ಮತ್ತು ಸಹಕಾರದಿಂದ ಮಾತ್ರ ಸಾದ್ಯವಿದ್ದು, ರಾಜ್ಯದಲ್ಲಿನ ಕುರುಹಿನಶೆಟ್ಟಿ ಸಮಾಜದಲ್ಲಿ ಮಹಿಳಾ ಸಮಾಜವನ್ನು ಆರಂಭಿಸಿದ ಕೀರ್ತಿ ಸಮಾಜದ ಹಿರಿಯರಾದ ತಿಮ್ಮಪ್ಪ ಅವರಿಗೆ ಸೇರಬೇಕೆಂದು ಪಟ್ಟಣದ ಕುರುಹಿನಶೆಟ್ಟಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಕೆ. ಶ್ರೀನಿವಾಸ್ ತಿಳಿಸಿದರು.
ಸಂಘಟನೆ ಮುಖ್ಯ: ಪಟ್ಟಣದ ಕುರುಹಿನಶೆಟ್ಟಿ ಸಮುದಾಯಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕುರುಹಿನಶೆಟ್ಟಿ ಮಹಿಳಾ ಸಮಾಜದ ಮೂವತ್ತನೆ ವಾರ್ಷಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಪಟ್ಟಣದ ಕುರುಹಿನಶೆಟ್ಟಿ ಮಹಿಳಾ ಸಮಾಜ ತನ್ನ ಮೂವತ್ತು ವಸಂತಗಳನ್ನು ಸುಲಲಿತವಾಗಿ ಪೂರೈಸಿ ಮುಂದಡಿ ಇಡುತ್ತಿದೆ. ಆದರೆ ಮಹಿಳಾ ಸಮಾಜ ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಮತ್ತಷ್ಟು ಸಂಘಟನೆ ಮುಖ್ಯ ಎಂದರು.
ಸೇವೆಯಲ್ಲಿ ತೊಡಗಿಕೊಳ್ಳಬೇಕು: ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ತಾಲೂಕು ಕೃಷಿ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಎಚ್.ಎಸ್. ಸುದರ್ಶನ್ ಅವರು, ಕುರಹಿನಶೆಟ್ಟಿ ಮಹಿಳಾ ಸಮಾಜ ತನ್ನ ಮೂವತ್ತು ವರ್ಷಗಳಲ್ಲಿ ಸಮಾಜಮುಖಿ ಸೇವೆ ನೀಡಿದೆ. ಅದರಂತೆ ಮುಂದಿನ ವರ್ಷಗಳಲ್ಲಿ ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಸಮಾಜದ ಎಲ್ಲ ಮಹಿಳೆಯರು ಸಂಘಟಿತರಾಗಿ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕುರುಹಿನಶೆಟ್ಟಿ ಸಮಾಜದ ಪ್ರಮುಖರುಗಳಾದ ಜಯಕುಮಾರ್, ಸುದರ್ಶನ್, ರಮೇಶ್, ಸರೋಜಗೋಪಾಲ್, ಪುರಸಭೆ ಸದಸ್ಯ ರಂಗನಾಥ್ ಗೌರವಿಸಿ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

