ರಸ್ತೆ ನಿಯಮ ಪಾಲನೆಗೆ ಜಾಗೃತಿ ಜಾಥಾ
ಕ.ಪ್ರ.ವಾರ್ತೆ , ಅರಸೀಕೆರೆ , ಜ.8
ಕರ್ನಾಟಕ ರಾಜ್ಯ ಪೊಲೀಸ್, ಹಾಸನ ಜಿಲ್ಲಾ ಅರಸೀಕೆರೆ ನಗರ ಪೊಲೀಸ್ ಠಾಣೆ ಆಶ್ರಯದಲ್ಲಿ ಮಂಗಳವಾರ ಬೆಳಗ್ಗೆ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅಪಘಾತದಿಂದ ಪಾರಾಗಿ ಎನ್ನುವ ಸಂದೇಶ ಸಾರುವ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು.
ಅಪಘಾತಕ್ಕೆ ಅವಸರವೇ ಕಾರಣ, ಅತಿವೇಗದಿಂದ ವಾಹನ ಚಾಲನೆ ಮಾಡಬೇಡಿ, ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ವಾಹನಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಿ ಸಂಸಾರ ಉಳಿಸಿ, ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎಂಬ ಅನೇಕ ಸಂದೇಶಗಳನ್ನು ಜಾಥಾದಲ್ಲಿ ಪಾಲ್ಗೊಂಡಿದ್ದ ಬಸವರಾಜೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಿತ್ತಿ ಪತ್ರಗಳಲ್ಲಿ ಪ್ರದರ್ಶಿಸಿದರು. ಅಲ್ಲದೇ ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆದರು. ನಗರ ಠಾಣೆಯ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಲೋಕೇಶ್ ಮಾತನಾಡಿ, ವಾಹನದಲ್ಲಿ ಚಲಿಸುವವರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಮಾಲೀಕರಿಗೆ ವಾಹನ ಸವಾರರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ. ಅಪಘಾತ ಸಂಭವಿಸಿದ ವೇಳೆ ಪರಿಹಾರ ಪಡೆದುಕೊಳ್ಳಲು ಸಾಧ್ಯವಿದೆ. ಆದ್ದರಿಂದ ವಾಹನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

