ಹಾಸನ

ಮಕ್ಕಳಲ್ಲಿ ಕಲಿಕಾ ಆಸಕ್ತಿ ಬೆಳೆಸಲು ಕರೆ

Published On :

ಅರಕಲಗೂಡು: ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವ ಜೊತೆಗೆ ಮಕ್ಕಳಲ್ಲಿ ಕಲಿಯುವ ಆಸಕ್ತಿ ಬೆಳೆಯುವಂತೆ ಮಾಡಲು ಶಿಕ್ಷಕರು ಮುಂದಾಗಬೇಕು ಎಂದು ಶಾಸಕ ಎ.ಮಂಜು ತಿಳಿಸಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿ ಪ್ರತಿಭೆಗೆ ಕೊರತೆ ಇಲ್ಲ. ಸೂಕ್ತ ಮಾರ್ಗದರ್ಶನ ದೊರೆತಲ್ಲಿ ಉತ್ತಮ ಸಾಧನೆ ಮಾಡಬಲ್ಲರು ಎಂಬುದಕ್ಕೆ ಹಲವು ನಿದರ್ಶನಗಳಿವೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದಿಗೂ ಹಲವು ಸಾಧನೆಗಳನ್ನು ಮಾಡುತ್ತಲೇ ಬಂದಿದ್ದಾರೆ ಎಂದು ನುಡಿದರು.
ಇಲಾಖೆ ಅಧಿಕಾರಿಗಳು ಶಿಕ್ಷಕರ ಕುಂದು ಕೊರತೆಗಳನ್ನೂ ತಾಳ್ಮೆಯಿಂದ ಕೇಳಿ ಅವರಿಗೆ ಅಗತ್ಯ ಮತ್ತು ಸರ್ಕಾರದ ಸವಲತ್ತುಗಳನ್ನು ಒದಗಿಸುವಂತೆ ತಿಳಿಸಿದ ಅವರು ಶಿಕ್ಷಕರನ್ನು ಗೌರವದಿಂದ ಕಾಣಬೇಕು ಎಂದರು.
 ತಾಲೂಕು ಪಂಚಾಯಿತಿ ಸದಸ್ಯ ನರಸೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರೇವಣ್ಣ, ಕ್ಷೇತ್ರ ಸಮನ್ವಯಾಧಿಕಾರಿ ರಮೇಶ್, ಸಿ.ಇ.ಓ ಚಲುವರಾಜ್,ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ್,ಜಿಲ್ಲಾ ಶಿಕ್ಷಕರ ಸಂಘದ ಕೋಶಾಧ್ಯಕ್ಷ ಹಿರಿಯಣ್ಣ ಕುಮಾರ್,ಶಿಕ್ಷಕರ ಸಂಘದ ಕಾರ್ಯದರ್ಶಿ ಮುತ್ತೇಗೌಡ,ನಿರ್ದೇಶಕ ಮೋಹನ್,ಸಿ.ಆರ್.ಪಿ.ಮಂಜುಳಾ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.