ಹಾಸನ

ಇಂದು ಜೈಲ್ ಭರೋ ಚಳವಳಿ

Published On :

ಕ.ಪ್ರ.ವಾರ್ತೆ ,  ಅರಸೀಕೆರೆ ,  ಜ.9
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರ್ಕಾರಿ ನೌಕರರು ಎಂದು ಘೋಷಣೆ ಮಾಡುವ ಜೊತೆಗೆ ಕನಿಷ್ಠ ವೇತನ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.10 ರಂದು ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದು ತಾಲೂಕು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷ ಕೆ.ನೇತ್ರಾವತಿ ತಿಳಿಸಿದ್ದಾರೆ.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಕರೆಯ ಮೇರೆಗೆ ನಮ್ಮ ಸಂಘವು 3 ಮತ್ತು 4 ಹಂತದ ಹೋರಾಟ ಸಂಘಟಿಸುತ್ತಿದ್ದು, ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸಿ.ಮತ್ತು ಡಿ ಗ್ರೂಪ್ ಸರ್ಕಾರಿ ನೌಕರರೆಂದು ಪರಿಗಣಿಸುವ ಜೊತೆಗೆ ಕನಿಷ್ಠ ವೇತನ ಕಾರ್ಯಕರ್ತೆಯರಿಗೆ 15 ಸಾವಿರ ಹಾಗೂ ಸಹಾಯಕಿಯರಿಗೆ 12 ಸಾವಿರ ರು. ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪಿಂಚಣಿ ಹೆಚ್ಚಳ, ಹಿಡಿಗಂಟು ಹೆಚ್ಚಳ, ಸೇವಾ ಹಿರಿತನದ ಭತ್ಯೆ, ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಹೆಚ್ಚಿಸುವುದು, ಇ.ಎಸ್.ಐ. ಸೌಲಭ್ಯ ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಸರ್ಕಾರ ಪೂರೈಸಬೇಕೆಂದು  ಹೋರಾಟ ನಡೆಸುತ್ತಿದ್ದು, ಜ.10 ರಂದು ಜೈಲ್ ಭರೋ ಚಳವಳಿ ನಡೆಸಲಾಗುತ್ತಿದೆ ಎಂದಿದ್ದಾರೆ.
4ನೇ ಹಂತದ ಹೋರಾಟವಾಗಿ ಫೆ.10 ರಂದು ಬೆಂಗಳೂರಿನ ವಿಧಾನಸೌಧ ಚಲೋ ಚಳವಳಿ ನಡೆಸಲಾಗುತ್ತಿದ್ದು, ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.