ಎಸ್ಸಿ,ಎಸ್ಟಿ ಕಾಯ್ದೆಯಡಿ ಮೊಕದ್ದಮೆ: ಮನವಿ
ಕ.ಪ್ರ.ವಾರ್ತೆ , ಹಾಸನ , ಜ. 9
ಎಸ್ಸಿ ಎಸ್ಟಿ ಕಾಯ್ದೆಯಡಿ ವಿನಾ ಕಾರಣ ಮೊಕದ್ದಮೆ ದಾಖಲು ಮಾಡುತ್ತಿದ್ದು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಸವನಹಳ್ಳಿ ಗ್ರಾಮಸ್ಥರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಗುರುವಾರ ಮನವಿ ನೀಡಿದರು.
ಆರಕಲಗೂಡು ತಾಲೂಕಿನ ಕಾಳೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಎಲ್ಲಾ ವರ್ಗದ ಜನರು ಸಹೋದರರಂತೆ ಇದ್ದೇವು. ಆದರೆ ಕೆಲ ಕಿಡಿಗೇಡಿಗಳು ಈ ಸಂಬಂಧವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳೆದು, ಅಶಾಂತು ವಾತಾವರಣ ನಿರ್ಮಾಣ ಮಾಡಿದ್ದಾರೆ. ಆದರೆ ಈ ಸಂಬಂಧ ಅಮಾಯಕರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಲವತ್ತುಕೊಂಡರು.
ಇಬ್ಬರು ಮಾಜಿ ಗ್ರಾಮಪಂಚಾಯ್ತಿ ಅಧ್ಯಕ್ಷರಿದ್ದು, ಈ ರೀತಿ ಅಮಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿರುವುದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಹಾಗೂ ಪರಸ್ಪರ ಅಪನಂಬಿಕೆ ಉಂಟಾಗಲು ಕಾರಣವಾದ ಸಮಾಜ ಘಾತಕ ಶಕ್ತಿಗಳನ್ನು ಗುರುತಿಸಿ ಅವರು ಕಾನೂನು ಕ್ರಮಕೈಗೊಂಡು ಈ ಹಿಂದಿನಂತೆ ಗ್ರಾಮಗಳಲ್ಲಿ ಶಾಂತಿ, ಸೌಹಾರ್ದತೆ ಮೂಡಿಸಲು ಪೊಲೀಸರು ಮತ್ತು ಇತರೆ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದರು. ಪ್ರಕಾಶ್, ಕೃಷ್ಣ, ಗೋವಿಂದ ಶೆಟ್ಟಿ, ಶಂಕರ್, ಬಿ.ಎಲ್.ರಘುನಾಥ್, ನಾಗೇಶ್, ಭೈರಶೆಟ್ಟಿ, ವರಲಕ್ಷ್ಮೀ, ರತ್ನಮ್ಮ, ಸಾವಿತ್ರಮ್ಮ, ಪಾರ್ವತಿ, ರತ್ನಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

