ಕಲಿಕೋತ್ಸವ ಅತ್ಯಂತ ಉಪಯುಕ್ತ ಕಾರ್ಯಕ್ರಮ:ತಾಪಂ ಅಧ್ಯಕ್ಷೆ ಪುಷ್ಪಾಗೌಡೇಗೌಡ ಅಭಿಮತ
ಕ.ಪ್ರ.ವಾರ್ತೆ , ಹೊಳೆನರಸೀಪುರ , ಜ. 9
ಪಠ್ಯದ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಂಡು ಮಕ್ಕಳಲ್ಲಿನ ಜ್ಞಾನಶಕ್ತಿ ಹೆಚ್ಚಿಸಿಕೊಳ್ಳಲು ಶಿಕ್ಷಣ ಇಲಾಖೆ ರೂಪಿಸಿರುವ ಕಲಿಕೋತ್ಸವ ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಕೆ.ಎಂ.ಪುಷ್ಪಾಗೌಡೇಗೌಡ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪಠ್ಯ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿ ಆ ಮೂಲಕ ಶೈಕ್ಷಣಿಕ ಗುಣಮಟ್ಟ ಅಭಿವೃದ್ಧಿಗೊಳಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಿಳಿಸಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಚಿಂತನೆ ಹಾಗೂ ಸ್ಪರ್ಧಾ ಮನೋಭಾವ ಹೆಚ್ಚಿ ಗ್ರಾಮೀಣ ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸಲು ಕಲಿಕೋತ್ಸವ ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಶಿವಮಾದಪ್ಪ ಅವರು, ವಿದ್ಯಾರ್ಥಿಗಳಲ್ಲಿನ ಅರಿವಿನ ಮಟ್ಟವನ್ನು ಉತ್ತಮಗೊಳಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವಲ್ಲಿ ಕಲಿಕೋತ್ಸವ ಹೆಚ್ಚಿನ ಸಹಕಾರಿ. ಶಿಕ್ಷಕರು ತಮ್ಮ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಲ್ಲಿ ಹೆಚ್ಚಾಗಿ ತೊಡಗಿಸಿ ಕೊಳ್ಳುವಂತೆ ಮುತುವರ್ಜಿ ವಹಿಸುವಂತೆ ಸಲಹೆ ನೀಡಿದರು.
ತಾಲೂಕಿನ ನಾನಾ ಶಾಲೆಗಳಿಂದ ಆಗಮಿಸಿದ್ದ ನೂರಾರು ಮಕ್ಕಳು ಕಲಿಕೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕುಮಾರ್, ತಾಲೂಕು ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎನ್.ನಾಗರಾಜು, ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಸೋಮಯ್ಯ, ಸಂಘದ ನಿರ್ದೇಶಕಿ ರಂಗಮ್ಮ, ಡಯಟ್ ಹಿರಿಯ ಉಪನ್ಯಾಸಕ ಈಶ್ವರ್, ಬಿಆರ್ಪಿ ಶಿವಕುಮಾರ್ ಇದ್ದರು. ಸುಪ್ರೀತ ತಂಡ ಪ್ರಾರ್ಥಿಸಿ, ಬಿಆರ್ಪಿ ಪರಶಿವಮೂರ್ತಿ ಸ್ವಾಗತಿಸಿದರು. ಯತೀಶ್ ರಾಯಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

