ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದರೆ ಉತ್ತಮ ಭವಿಷ್ಯ
ಕ.ಪ್ರ.ವಾರ್ತೆ , ಜಾವಗಲ್ , ಜ. 9
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚುಹೆಚ್ಚಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜೆ.ಬಿ. ವಿಜಯಲಕ್ಷ್ಮಿ ಅಭಿಪ್ರಾಯಪಟ್ಟರು.
ಜಾವಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಯೋಜನೆಯಡಿ ಮಂಗಳವಾರ ಏರ್ಪಡಿಸಲಾಗಿದ್ದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳು, ರಕ್ಷಣಾ ಇಲಾಖೆಯ ನೇಮಕಾತಿ, ಉದ್ಯೋಗ ವಿನಿಮಯ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ಸವಿಸ್ತಾರದ ಮಾಹಿತಿ ನೀಡಿದರು. ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಿ ಗ್ರಾಮಾಂತರ ಪ್ರದೇಶದ ಯುವತಿ ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅದರ ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.
ಮಾಹಿತಿ: ಕೃಷಿಕ್ ಸರ್ವೋದಯ ಫೌಂಡೇಶನ್ ಹಾಸನ ಶೈಕ್ಷಣಿಕ ಸಮನ್ವಯಾಧಿಕಾರಿ ಜಿ.ಎಚ್. ಅನಂತರಾಮು ಮಾತನಾಡಿ, ಶಿಕ್ಷಣದಿಂದ ಯುವಜನತೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ವಿಫುಲ ಅವಕಾಶಗಳಿದ್ದು, ಯುವ ಜನತೆ ಸುಶಿಕ್ಷಿತರಾಗಬೇಕು. ಓದುವಿನ ಪ್ರಾಮುಖ್ಯತೆ, ನ್ಯಾಷನಲ್ ಡಿಫೇನ್ಸ್ ಆಕಾಡಮಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು, ಅಂಚೆ ಇಲಾಖೆಯ ಬಹುಕಾಲಿಯ ಸಿಬ್ಬಂದಿ ನೇಮಕಾತಿ ಮತ್ತಿತರ ಉದ್ಯೋಗ ಅವಕಾಶಗಳು ಮತ್ತು ಪರೀಕ್ಷೆಗಳು ಹಾಗೂ ತರಬೇತಿ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಮನವಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಸ್ಥೆಯು ನಡೆಸುತ್ತಿರುವ ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ತರಬೇತಿಗಳನ್ನು ವಿವರಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಕರೆ: ಕಾರ್ಯಾಗಾರವನ್ನು ಉದ್ಘಾಟಿಸಿದ ಪ್ರಾಂಶುಪಾಲ ವಸಂತರಾಜ ಅರಸ್ ಮಾತನಾಡಿ, ಇಂತಹ ಕಾರ್ಯಾಗಾರಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆನೀಡಿದರು.
ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ, ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಜೀವನ ರೂಢಿಸಿಕೊಳ್ಳಲು ವೃತ್ತಿ ಮಾರ್ಗದರ್ಶನ ಪೂರಕವಾಗಿದೆ ಎಂದರು.
ವಿಶೇಷ ಘಟಕದ ಘಟಕಾಧಿಕಾರಿ ಹಾಗೂ ಉಪನ್ಯಾಸಕಿ ತಬಸ್ಸಂ ಆರಾ, ಉಪನ್ಯಾಸಕ ಎನ್.ಉದಯಕುಮಾರ್ ಶಿವಲಿಂಗಯ್ಯ, ಸುಕನ್ಯಾ, ಮಂಜುನಾಥ್, ಹೆಚ್.ಕೆ ಉದಯಕುಮಾರ್ ಮಾತನಾಡಿದರು. ಶ್ರೀನಿವಾಸ್, ನಾಗೇಶ್, ಲತಾ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

