ಪೂರ್ವಭಾವಿ ಸಭೆಗೆ ಅಧಿಕಾರಿಗಳ ಗೈರು: ಖಂಡನೆ
ಕ.ಪ್ರ.ವಾರ್ತೆ , ಬೇಲೂರು , ಜ. 10
ಪ್ರತಿ ರಾಷ್ಟ್ರೀಯ ಹಬ್ಬಗಳ ದಿನ ಹಾಗೂ ಪೂರ್ವಭಾವಿ ಸಭೆಯಲ್ಲಿ ತಾಲೂಕಿನ ನಾನಾ ಇಲಾಖೆ ಅಧಿಕಾರಿಗಳು ಗೈರು ಹಾಜರಿಯಾಗುತ್ತಾರೆ. ಈ ಬಗ್ಗೆ ತಾಲೂಕು ಆಡಳಿತ ಮೃದು ಧೋರಣೆ ಅನುಸರಣೆ ಮಾಡುತ್ತಿದೆ ಎಂದು ತಾಲೂಕು ಕರವೇ ಅಧ್ಯಕ್ಷ ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದರು.
ಮೃದು ಧೋರಣೆ ಬೇಡ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಪ್ರತಿ ಸಭೆಯಲ್ಲಿ ಗೈರಿನ ಬಗ್ಗೆ ಕ್ರಮ ಕೈಗೊಳ್ಳುತ್ತವೆ ಎಂದು ಸಬೂಬು ಹೇಳುವ ತಾಲೂಕು ಆಡಳಿತ ಮೃದು ಧೋರಣೆ ಅನುಸರಣೆ ಮಾಡಬಾರದು ಎಂದರು.
ಗಣರಾಜ್ಯೋತ್ಸವ ದಿನ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ದೇಶಕ್ಕೆ ಅರ್ಪಿಸಿದ ದಿನದ ಅಂಗವಾಗಿ ತಾಲೂಕು ಆಡಳಿತ ನೆಪ ಮಾತ್ರಕ್ಕೆ ಅಂಬೇಡ್ಕರ್ ಪುತ್ಥಳಿ ಸ್ವಚ್ಛ ಮಾಡಿದರೆ ಸಾಲದು, ಅವರ ವಿಚಾರಗಳನ್ನು ಸಮಜಕ್ಕೆ ತಿಳಿಸುವ ವೇದಿಕೆಯಾಗಬೇಕು ಎಂದರು.
ಸಲಹೆ: ತಾಲೂಕು ಪಂಚಾಯ್ತಿ ಅಧ್ಯಕ್ಷೆ ಶಾಂತಮ್ಮಮಹದೇವಯ್ಯ ಮಾತನಾಡಿ, ವೇದಿಕೆಗೆ ತಾಲೂಕು ಪಂಚಾಯ್ತಿ ಸದಸ್ಯರನ್ನು ಕಡೆಗಣನೆ ಮಾಡುತ್ತಾರೆ, ಆಹ್ವಾನ ಪತ್ರಿಕೆಯಲ್ಲಿ ಇಲ್ಲದವರು ವೇದಿಕೆಯಲ್ಲಿ ಕುಳಿತು ಮಾತನಾಡುತ್ತಾರೆ ಎಂದ ಅವರು, ತಾಲೂಕು ಆಡಳಿತ ಈ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಅರ್ಥಪೂರ್ಣ ಕಾರ್ಯಕ್ರಮ: ಇದಕ್ಕೆ ಉತ್ತರಿಸಿದ ತಹಸೀಲ್ದಾರ್ ಜಗದೀಶ್, ಡಾ. ಬಿ.ಆರ್. ಅಂಬೇಡ್ಕರ್ ಭಾರತಕ್ಕೆ ಸಂವಿದಾನ ಅರ್ಪಣೆ ಮಾಡಿದ ದಿನದಲ್ಲಿ ಅವರ ವಿಚಾರಧಾರೆಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಅರಿವು ಮೂಡಿಸಲು ವೇದಿಕೆಯಲ್ಲಿ ವಿಚಾರ ತಿಳಿಸಲಾಗುತ್ತದೆ ಎಂದರು. ಕಾಟಾಚಾರದ ಹಬ್ಬಗಳನ್ನು ಯಾವುದೇ ಕಾರಣಕ್ಕೂ ತಾಲೂಕು ಆಡಳಿತ ಮಾಡುವುದಿಲ್ಲ. ಅರ್ಥಪೂರ್ಣ ಕಾರ್ಯಕ್ರಮ ಮಾಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯರಾದ ಬಿ.ಡಿ. ಚಂದ್ರೇಗೌಡ, ಹೇಮಾವತಿ ಮಂಜುನಾಥ್, ಜಯಶೀಲಾ ಜಯಶಂಕರ್, ಜಿ.ಟಿ. ಇಂದಿರಾ ಧರ್ಮಪ್ಪ, ಅಣ್ಣೇಗೌಡ, ತಾಲೂಕು ಪಂಚಾಯ್ತಿ ಇಓ ಬಸವರಾಜು ಕಲ್ಲಪ್ಪ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

