ಹಾಸನ

ಸಾಮಾಜಿಕ ನ್ಯಾಯಕ್ಕಾಗಿ ಯೋಜನೆಗಳ ಜಾರಿ

Published On :

ಹಾಸನ: ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯೆ ಪಾರ್ವತಮ್ಮ ನಂಜುಂಡಾಚಾರ್ ಹೇಳಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಸಾಮಾಜಿಕ ಭದ್ರತಾ ಯೋಜನೆ, ವಾರ್ತಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಅರಕಲಗೂಡು, ಕೊಣನೂರಿನ ಸಿ.ಎಂ.ಎಸ್.ಎಸ್. ಸೇವಾ ಸಂಸ್ಥೆ, ಬನ್ನೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಇತ್ತೀಚೆಗೆ ಅರಕಲಗೂಡು ತಾಲೂಕಿನ  ಕೆ.ಅಬ್ಬೂರು ಸರ್ಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಯೋಜನ ಪಡೆದುಕೊಳ್ಳಬೇಕು: ಈ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿಯಲ್ಲಿ ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ಮನಸ್ವಿನಿ, ವಿಧವೆಯರ ನಿವೃತ್ತಿ ವೇತನ, ರಾಷ್ಟ್ರೀಯ ಕುಟುಂಬ ಲಾಭ ಯೋಜನೆಗಳು 1995ರಲ್ಲಿ ಜಾರಿಗೆ ಬಂದಿದ್ದು, ಇದರನ್ವಯ ಫಲಾನುಭವಿಗಳು ಸಂಬಂಧಪಟ್ಟ ಇಲಾಖೆಗಳ ಮೂಲಕ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಫಲಾನುಭವಿಗಳು ಮುಂದಾಗಬೇಕು: ತಾಲ್ಲೂಕಿನ ಶಿಶು ಅಭಿವೃದ್ಧಿ ಮೇಲ್ವಿಚಾರಕಿ ಮಂಜುಳ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳಿದ್ದು, ವಿಶೇಷವಾಗಿ ಅಂಗವಿಕಲರ ಶ್ರೇಯೋಭಿವೃದ್ಧಿಗೆ ಇಲಾಖೆ ಶ್ರಮಿಸುತ್ತಿದ್ದು, ಇದರ ಲಾಭವನ್ನು ಫಲಾನುಭವಿಗಳು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಸೇವೆ ಒದಗಿಸಲು ಶ್ರಮ: ಕೊಣನೂರಿನ ಸಿ.ಎಂ.ಎಸ್.ಎಸ್ ಸೇವಾ ಸಂಸ್ಥೆಯ ಸಂಯೋಜಕಿ ಅಂತೋಣಿ ಮೇರಿ ಅವರು ಮಾತನಾಡಿ, ಸಂಸ್ಥೆಯು ಸಾಮಾಜಿಕ ಭದ್ರತೆಯ ಸೇವೆಗಳನ್ನು ಒದಗಿಸಲು ಗ್ರಾಮೀಣ ಪ್ರದೇಶಗಳಲ್ಲಿ ಶ್ರಮಿಸುತ್ತಿದೆ ಎಂದರು.
ಸೌಲಭ್ಯ ಪಡೆದುಕೊಳ್ಳಿ: ಶಾಲೆಯ ಮುಖ್ಯೋಪಾಧ್ಯಾಯಿನಿ ಹೆಚ್.ಟಿ. ಧನಲಕ್ಷ್ಮಿ ಮಾತನಾಡಿ, ಸರ್ಕಾರವು ಜಾರಿಗೆ ತಂದಿರುವ ಸರ್ವಶಿಕ್ಷಣ ಅಭಿಯಾನ, ಮಧ್ಯಾಹ್ನದ ಬಿಸಿಯೂಟ ಯೋಜನೆ ಯಶಸ್ವಿಯಾಗಿ ನಡೆಯುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಸಿಗುವ ಶಿಕ್ಷಣದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ವಿವರಿಸಿದರು.
ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸುಮಾ ಮೋಹನ್, ಸದಸ್ಯರಾದ ಶೇಖರ್, ಸೋಮಶೇಖರ್, ರಾಮಚಂದ್ರ, ಮಂಜಣ್ಣ, ಎ.ಸಿ ರಾಜು, ಶಾಲಾ ಶಿಕ್ಷಕರಾದ ಎಂ.ರವೀಂದ್ರ  ಮತ್ತಿತರರು ಹಾಜರಿದ್ದರು. ಶಾಲಾ ಶಿಕ್ಷಕಿ ಪ್ರತಿಭಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಕೆ.ಪಿ. ಭಾಗೀರತಿ ವಂದಿಸಿದರು.
ಇದೇ ಸಂದರ್ಭದಲ್ಲಿ ಮಹಿಳೆಯರಿಗೆ, ಪುರುಷರಿಗೆ ನಾನಾ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು ಹಾಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.