250ಕ್ಕೂ ಹೆಚ್ಚು ಮಂದಿಯ ನೇತ್ರ ತಪಾಸಣೆ
ಅರಸೀಕೆರೆ: ಪ್ರತಿಯೊಬ್ಬ ಮನುಷ್ಯನಿಗೆ ಕಣ್ಣು, ಪ್ರಮುಖವಾದ ಅಂಗವಾಗಿದ್ದು ಅದನ್ನು ಸಂರಕ್ಷಿಸಿ ತನ್ನ ಜೀವಿತಾವಧಿಯ ಕೊನೆಯವರೆಗೂ ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಕಾಮರಾಜ್ ಅಭಿಪ್ರಾಯಪಟ್ಟರು.
ಪಟ್ಟಣದ ಹಾಸನ ರಸ್ತೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಸನ, ಶರತ್ ಕಣ್ಣಿನ ಆಸ್ಪತ್ರೆ ಕಡೂರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನವಿ: ದೀನದಲಿತರು, ಬಡವರು, ವೃದ್ಧರು ಶಸ್ತ್ರ ಚಿಕಿತ್ಸೆ ಮಾಡಿಸಲು ಹಣವಿಲ್ಲದೆ ಅಂಧತ್ವದಲ್ಲೇ ಜೀವನ ನಡೆಸುತ್ತಿದ್ದು ಅಂತಹವರ ಬಾಳಿಗೆ ಬೆಳಕನ್ನು ತರಲು ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಮನವಿ ಮಾಡಿದರು.
ಉಚಿತ ಲೆನ್ಸ್: ಈ ಶಿಬಿರದಲ್ಲಿ ಸುಮಾರು 250ಕ್ಕೂ ಹೆಚ್ಚು ಮಂದಿ ಕಣ್ಣಿನ ಪರೀಕ್ಷೆಯನ್ನು ನಡೆಸಲಾಯಿತು. ಇದರಲ್ಲಿ 75 ಮಂದಿ ಕಣ್ಣಿನ ಪೊರೆ ಚಿಕಿತ್ಸೆಗೆ ಆಯ್ಕೆಯಾಗಿದ್ದು ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ ನಡೆಸಿ ಉಚಿತವಾಗಿ ಲೆನ್ಸ್ ಅಳವಡಿಸಲಾಗುವುದು ಎಂದು ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಎನ್. ಗುರುರಾಜ್ ತಿಳಿಸಿದರು.
ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಸದಸ್ಯ ಶಂಕರ್ ರಾವ್, ರಮೇಶ, ಸುಬ್ಬು, ಇಳಯರಾಜ, ಡೀಸೋಜ, ಸಲೀಂ, ಬಷಿರ್, ನಾರಾಯಣ, ಶ್ರೀನಿವಾಸ, ಸುರೇಶ, ಸುರೇಶ (ಸವಾರಿ), ಗಂಗಾಧರ, ಪರಶುರಾನ್ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

