ಹಾಸನ

ಆಂಗ್ಲ ಭಾಷೆಯಲ್ಲಿ ಆಮಂತ್ರಣ: ಕರವೇ ಕಾರ್ಯಕರ್ತರ ಪ್ರತಿಭಟನೆ

Published On :

ಬೇಲೂರು: ಕನ್ನಡ ಭಾಷೆಯಲ್ಲಿ ಆಹ್ವಾನ ಪತ್ರಿಕೆ ಮುದ್ರಿಸದೆ ಪಟ್ಟಣದ ಪೂರ್ಣಪ್ರಜ್ಞಾ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಇಂಗ್ಲಿಷಿನಲ್ಲಿ ಮುದ್ರಿಸಿರುವುದನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಶಾಲೆಯ ಮುಂಭಾಗ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಕನ್ನಡ ಭಾಷೆಗೆ ಅವಮಾನ ಮಾಡಿರುವ ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಪಟ್ಟಣದ ಎಲ್ಲ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಕನ್ನಡದಲ್ಲಿ ಮುದ್ರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಲ್ಲ ಶಾಲೆಗಳಿಗೆ ಸೂಚನೆ ನೀಡುವಂತೆ ಕೋರಲಾಗಿತ್ತು. ಅದರೂ ಸಂಸ್ಥೆಯವರು ಇಂಗ್ಲಿಷ್‌ನಲ್ಲಿ ಮುದ್ರಿಸುವ ಮೂಲಕ ಕನ್ನಡ ಭಾಷಗೆ ಅವಮಾನ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಾಕೀತು ಮಾಡಿದರು. ಈ ಸಂಬಂಧ ಸಂಸ್ಥೆಯ ಕಾರ್ಯದರ್ಶಿ ಮುರುಳಿ ಮಾತನಾಡಿ, ಈ ವಿಚಾರ ಅಡಳಿತ ಮಂಡಳಿ ಗಮನಕ್ಕೆ ಬಂದಿಲ್ಲ. ನಮಗೂ ಕನ್ನಡ ಭಾಷೆಯ ಮೇಲೆ ಅಭಿಮಾನವಿದೆ. ಇಂದೇ ಕನ್ನಡದಲ್ಲಿ ಆಹ್ವಾನ ಪತ್ರಿಕೆಯನ್ನು ಮುದ್ರಿಸುವುದಾಗಿ ತಿಳಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಈ ರೀತಿ ಅಚಾತುರ್ಯ ನಡೆಯಲು ಬಿಡುವುದಿಲ್ಲ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಖಾದರ್, ಪ್ರಸನ್ನ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.