ನೀರು ಸರಬರಾಜು ಬಂದ್ ಮಾಡಿ ಪ್ರತಿಭಟನೆ
ಬೇಲೂರು: ಯಗಚಿ ಜಲಾಶಯದಿಂದ ಹಾದು ಹೋಗಿರುವ ಪೈಪನ್ನು ಕೊರೆದು ಅಕ್ರಮವಾಗಿ ನೀರು ಪಡೆಯುತ್ತಿದ್ದಾರೆ ಎಂದು ಅರೋಪಿಸಿ ಚಿಕ್ಕಮಗಳೂರು ಪಟ್ಟಣಕ್ಕೆ ಸರಬರಾಜು ಅಗುತ್ತಿದ್ದ ನೀರನ್ನು ಬಂದ್ ಮಾಡುವ ಮೂಲಕ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು ತಾಲೂಕಿನ ಕೆ.ಬಿ.ಹಾಳ್ ಗ್ರಾಮದ ಮೂಲಕ ಪೈಪ್ಲೈನ್ ಹಾದು ಹೋಗಿದ್ದು, ಈ ಗ್ರಾಮದ ಜನರು ಅಕ್ರಮವಾಗಿ ಪೈಪ್ಲೈನ್ ಕೊರೆದು ನೀರು ಪಡೆಯುತ್ತಿದ್ದು, ಇದರಿಂದ ಮೂಲ ಯೋಜನೆಯ ಗ್ರಾಮಗಳಿಗೆ ನೀರಿನ ವ್ಯತ್ಯಯ ಕಂಡುಬಂದಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಎಂಜಿನಿಯರ್ ಇತರೆ ಅಧಿಕಾರಿಗಳ ಜತೆ ಚರ್ಚೆ ಮಾಡಿ ಅಕ್ರಮ ನೀರು ಪಡೆದಿರುವುದನ್ನು ತಪ್ಪಿಸಿ ಎಂದು ಮನವಿ ಮಾಡಿದ್ದರೂ ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ.
ಈ ಸಂಬಂಧ ಶಾಸಕ ವೈ.ಎನ್.ರುದ್ರೇಶಗೌಡ ಮಾತನಾಡಿ, ಅಕ್ರಮವಾಗಿ ನೀರು ಪಡೆದಿರುವುದರಿಂದ ಈ ಭಾಗದ ಜನರು ಕಳೆದ ಮೂರು ತಿಂಗಳಿಂದ ಕುಡಿಯುವ ನೀರಿಲ್ಲದೆ, ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಹಲವಾರು ಬಾರಿ ಚಿಕ್ಕಮಗಳೂರು ಜಿಲ್ಲೆಯ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ. ಸರ್ಕಾರ ಹಾಗೂ ಮಂತ್ರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿಲ್ಲ ಎಂದರು.
ತಾಲೂಕು ಕಾಂಗ್ರೆಸ್ ಅಧ್ಯಕ್ಷ ವೈ.ಟಿ.ದಾಮೋದರ, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಮುಖಂಡರಾದ ದೊರೆಯಪ್ಪ, ನಾಗರಾಜು, ನರಸಿಂಹಸ್ವಾಮಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

