'ಹೆಣ್ಣಿಗೆ ಹೆಚ್ಚಿನ ಸಮಾನತೆ ಅಗತ್ಯ'
ಕ.ಪ್ರ.ವಾರ್ತೆ , ಹೊಳೆನರಸೀಪುರ , ಜ 14
ಕೇವಲ ಸ್ಥಾನಮಾನಗಳಲ್ಲಷ್ಟೇ ಹೆಣ್ಣಿಗೆ ಸಮಾನತೆ ದೊರೆತರೆ ಸಾಲದು, ಬದಲಿಗೆ ಹೆಣ್ಣು ಎಲ್ಲಾ ಹಂತಗಳಲ್ಲಿಯೂ ತಮ್ಮವಳೆಂಬ ಉದಾತ್ತ ಭಾವನೆ ಎಲ್ಲರಲ್ಲೂ ಮೂಡಿದಾಗ ಮಾತ್ರವೇ ಹೆಣ್ಣಿನ ಸಬಲೀಕರಣ ಹಾಗೂ ಸಮಾನತೆಯ ಜೀವನ ದೊರಕಲು ಸಾಧ್ಯ ಎಂದು ಪಟ್ಟಣದ ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಆರ್. ಸರೋಜಿನಿದೇವಿ ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ಪ್ರೇಮ ಮಹಿಳಾ ಸಮಾಜ ಹಾಗೂ ಹಾಸನದ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಪಟ್ಟಣದ ಜೈನ ಬಸದಿಯಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆಯು ಕೇವಲ ಕಾಯ್ದೆ- ಕಾನೂನಿನಂದಷ್ಟೇ ಜಾರಿಯಾದರೆ ಸಾಲದು. ಅದು ಎಲ್ಲರ ಮನದಲ್ಲೂ ಮೂಡಬೇಕಿದೆ ಎಂದರು.
ಸರ್ಕಾರ ಹೆಣ್ಣುಮಕ್ಕಳಿಗೆ ಶಿಕ್ಷಣದಲ್ಲಿ ಸಮಾನತೆಯ ಹಕ್ಕನ್ನು ನೀಡಿದ್ದರೂ, ಇಂದಿಗೂ ಶೇ. 70ರಷ್ಟು ಮಹಿಳೆಯರು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ ಎಂದು ವಿಷಾದಿಸಿದರು.
ವಿಷಾದನೀಯ: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಎಪಿಎಂಸಿ ಅಧ್ಯಕ್ಷ ಎಚ್.ಎಸ್. ಸುದರ್ಶನ್ ಮಾತನಾಡಿ, ಭೂಮಿಯಿಂದ ಬಾನಿನವರೆಗೂ ತನ್ನ ಆತ್ಮಸ್ಥೈರ್ಯ ಹಾಗೂ ಛಲದಿಂದ ತನ್ನ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಮಹಿಳೆಯು ಯಾವ ಹಂತದಲ್ಲಿಯೂ ಅಬಲೆಯಲ್ಲ ಎಂಬುದಕ್ಕೆ ನಿದರ್ಶನಗಳಿವೆ. ಆದರೂ ದಿನದಿಂದ ದಿನಕ್ಕೆ ಮಹಿಳೆಯ ಮೇಲಿನ ದೌರ್ಜನ್ಯ ಹೆಚ್ಚುತ್ತಲೇ ಇರುವುದು ವಿಷಾದನೀಯ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ವ್ಯವಸ್ಥಾಪಕರಾದ ಪುರುಷೋತ್ತಮ್, ತಾಲೂಕು ಜನಪದ ಪರಿಷತ್ತಿನ ಅಧ್ಯಕ್ಷರಾದ ಬಾ.ರಾ. ಸುಬ್ಬರಾಯ, ಜೈನ ಬಸದಿಯ ವ್ಯವಸ್ಥಾಪಕ ದಿಲೀಪ್ ಕುಮಾರ್ ಜೈನ್, ಪ್ರೇಮಾ ಮಹಿಳಾ ಸಮಾಜದ ಅಧ್ಯಕ್ಷೆ ಪ್ರೇಮಾ ಮಂಜುನಾಥ್ ಇದ್ದರು. ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲೆ ಲಲಿತಾಬಾಯಿ ಅಧ್ಯಕ್ಷತೆ ವಹಿಸಿದ್ದರು. ಉಮೇಶ್ ನಿರೂಪಿಸಿದರು. ಲಕ್ಮೀ ನಾಗರಾಜ್ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

