ಅವಹೇಳನಕಾರಿ ಹೇಳಿಕೆಗೆ ವಿರೋಧ
ಚನ್ನರಾಯಪಟ್ಟಣ: ಹಿರಿಯ ಸಾಹಿತಿ ನಾ.ಡಿಸೋಜ ಅವರು ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ ಸಂತೇಶಿವರದ ಡಾ.ಎಸ್.ಎಲ್. ಭೈರಪ್ಪನವರ ಬಗ್ಗೆ ಕೀಳುಮಟ್ಟದ ಹೇಳಿಗೆ ನೀಡಿದ್ದಾರೆಂದು ಖಂಡಿಸಿ ಶುಕ್ರವಾರ ಚನ್ನರಾಯಪಟ್ಟಣದ ಹಲವು ಸಂಘಟನೆಗಳು, ಶಿಕ್ಷಣ ಸಂಸ್ಥೆಗಳ ಪ್ರಮುಖರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ತಾಲೂಕು ಕಚೇರಿಗೆ ಆಗಮಿಸಿ ಶಿರಸ್ತೇದಾರ್ ಉಡುಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಡಾ. ಮಹೇಶ್, ಪಟೇಲ್ ಮಂಜುನಾಥ್, ಸಿ.ಎನ್. ಅಶೋಕ್, ಬಿಆರ್ಪಿ ನಾಗರಾಜ್, ರಾಜ್ ಕುಮಾರ್, ಶಿವರಾಂ, ಭರತ್ ಗೌಡ, ಭಾಷ, ಕನ್ನಡವಾಸು, ಕೃಷ್ಣಪ್ರಸಾದ್, ಸುಬ್ರಹ್ಮಣ್ಯ, ಮಳ್ಳುಕೆರೆ ಪ್ರಕಾಶ್, ಕೆ.ಜಿ.ಬಾಬು, ಅನಂತರಾಮಯ್, ಜ್ಞಾನಸಾಗರ ಇಂಟರ್ ನ್ಯಾಷನಲ್ ಶಾಲೆ, ಶಾಲಿನಿ ವಿದ್ಯಾ ಶಾಲೆ, ನಾಗೇಶ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಪ್ರತಿಭಟನೆ
ಚನ್ನರಾಯಪಟ್ಟಣ: ಸಾಹಿತಿ ಭೈರಪ್ಪ ವಿರುದ್ಧ ನಾ. ಡಿಸೋಜ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು. ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ಹಾಗೂ ಬ್ರಾಹ್ಮಣ ಯುವ ವೇದಿಕೆ ಸೇರಿದಂತೆ ಹಲವು ಚಿಂತಕರು, ಭೈರಪ್ಪ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮೆರವಣಿಗೆ ನಡೆಸಿದರು.
ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಭೈರಪ್ಪ ವಿರುದ್ಧ ನೀಡಿರುವ ಹೇಳಿಕೆ ಖಂಡನೀಯ ಕೂಡಲೇ ಡಿಸೋಜ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಕನ್ನಡ ಪರ ಸಂಘಟನೆಗಳ ಜತೆ ತಾವೆಲ್ಲರೂ ಕೈ ಜೋಡಿಸಿ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ತಿಳಿಸಿದರು. ಪರಿಸರ ಪ್ರೇಮಿ ಅಶೋಕ್, ಡಾ. ನಾಗೇಶ್, ಡಾ. ಮಹೇಶ್ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಸುಬ್ರಹ್ಮಣ್ಯ, ಕನ್ನಡ ವಾಸು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

