ಹಾಸನ

4 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

Published On :

ಕ.ಪ್ರ.ಅರಕಲಗೂಡು ,  ಜ.18
ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2012-13ನೇ ಸಾಲಿನ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 2ನೇ ಹಂತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಳಿಗೆ ಶಾಸಕ ಎ. ಮಂಜು ಅವರು ಚಾಲನೆ ನೀಡಿದರು.
ಅವರು ಇಲ್ಲಿನ ಸಾಲಗೇರಿ ರಸ್ತೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ ಕಳೆದ 20 ವರ್ಷಗಳಲ್ಲಿ ಪಟ್ಟಣ ಹಂತಹಂತವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆದಾಗ್ಯೂ ಇನ್ನೂ ಆಗಬೇಕಾದ ಕೆಲಸಗಳು ಸಾಕಷ್ಟಿವೆ. ಈ ಸಂಬಂಧವಾಗಿ # 30 ಕೋಟಿ ಅನುದಾನ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ನುಡಿದರು.
ಸಹಕರಿಸಬೇಕು: ಅಭಿವೃದ್ಧಿ ಕಾಮಗಾರಿಗಳಿಗೆ ಹಣ ತಂದು ಯೋಜನೆಗಳನ್ನು ರೂಪಿಸುವುದು ಪ್ರಮುಖವಲ್ಲ. ಆ ಕೆಲಸಗಳು ಗುಣಮಟ್ಟದ್ದಾಗಿದ್ದು, ಅವುಗಳನ್ನು ಉಳಿಸಿಕೊಳ್ಳುವ ಕೆಲಸ ಆಗಬೇಕು ಎಂದರು. ಗುಣಮಟ್ಟದ ಕಾಮಗಾರಿಗಳ ವಿಷಯದಲ್ಲಿ ಅಧಿಕಾರಿಗಳಷ್ಟೇ ಜವಾಬ್ದಾರಿ ಸಾರ್ವಜನಿಕರಿಗೂ ಇದ್ದು ಗುಣಮಟ್ಟದ ಕಾಮಗಾರಿಗೆ ಎಲ್ಲರೂ ಸಹಕರಿಸಬೇಕು ಎಂದರು.
ನಿವೇಶನ ನೀಡಿದ ನಂತರ ಕಾಮಗಾರಿ: ಪಟ್ಟಣದಲ್ಲಿ ಒಳ ಚರಂಡಿ ಯೋಜನೆಯ ಕಾಮಗಾರಿಗೆ ಈಗಾಗಲೇ ಪ್ರಯತ್ನ ಸಾಗಿದ್ದು, ಮುಂದಿನ ತಿಂಗಳಲ್ಲಿ ಕೆಲಸಗಳು ಆರಂಭವಾಗುವ ಸಂಭವವಿದೆ ಎಂದರು. ಕೋಟೆ ಪ್ರದೇಶದ ಸಾಲಗೇರಿ ಅಗಲೀಕರಣ ಕಾಮಗಾರಿಗೆ 40 ಅಡಿ ಎಂದು ನಿಗದಿಗೊಳಿಸಲಾಗಿದೆ. ಇಲ್ಲವಾದರೆ ಈ ಪ್ರದೇಶದಲ್ಲಿ ಮನೆಗಳೇ ಉಳಿಯುವುದಿಲ್ಲ. ಬಡವರಿಗೆ ಪರಿಹಾರವಾಗಿ ನಿವೇಶನಗಳನ್ನು ನೀಡಿದ ನಂತರವಷ್ಟೇ ಅಗಲೀಕರಣ ಕಾರ್ಯ ಆರಂಭಿಸಲಾಗುವುದು ಎಂದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ತಹಸೀಲ್ದಾರ್ ಜಗದೀಶ್ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರು ಜಾಗೃತರಾಗಿ ಬಳಸಿಕೊಳ್ಳಬೇಕಲ್ಲದೇ ಉತ್ತಮ ಬದುಕು ಸಾಗಿಸಲು ಮುಂದಾಗಬೇಕು ಎಂದರು.
ಸಮಾರಂಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಬಾಬು, ಇಂಜಿನಿಯರ್ ಕವಿತಾ, ದೊಡ್ಡಮ್ಮ ಸೇವಾ ಸಮಿತಿ ಅಧ್ಯಕ್ಷ ಎ.ಎಸ್.ರಾಮಸ್ವಾಮಿ, ವಿವಿಧ ವಾರ್ಡುಗಳ ಸದಸ್ಯರು, ಯುವ ಕಾಂಗ್ರೆಸ್ ಅಧ್ಯಕ್ಷ ಬಾಣದಹಳ್ಳಿ ಗಣೇಶ್, ಮಧು, ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.