ಪೋಲಿಯೊ ಮುಕ್ತ ದೇಶ: ಶ್ಲಾಘನೀಯ ಸಂಗತಿ
ಕ.ಪ್ರ.ವಾರ್ತೆ , ಹೊಳೆನರಸೀಪುರ , ಜ.19
ವಿಶ್ವ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿರುವುದು ಅತ್ಯಂತ ಶ್ಲಾಘನೀಯ ಸಂಗತಿ ಎಂದು ತಹಸೀಲ್ದಾರ್ ಆರ್.ಬಿ.ಶಿವಶಂಕರಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಮೊದಲ ಹಂತದ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿ ಘೋಷಣೆಯಾಗಿದ್ದರೂ ಅಕ್ಕ ಪಕ್ಕದ ರಾಷ್ಟ್ರಗಳು ಪೋಲಿಯೋ ಮುಕ್ತ ರಾಷ್ಟ್ರಗಳಾಗಿ ಹೊರಹೊಮ್ಮುವವರೆವಿಗೂ ಭಾರತದಲ್ಲಿ ಪೋಲಿಯೊ ಲಸಿಕೆಯನ್ನು ಮುಂದುವರೆಸಲಾಗುವುದು ಎಂದು ಹೇಳಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್.ಎನ್.ರಾಜೇಶ್ ಮಾತನಾಡಿ, ತಾಲೂಕಿನಲ್ಲಿ ಮೊದಲ ಹಂತದ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕಾಗಿ 90 ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, ಜ.20 ಮತ್ತು ಜ.21ರಂದು ಮನೆ-ಮನೆ ಭೇಟಿ ನೀಡಿ ಪೋಲಿಯೊ ಲಸಿಕೆಯಿಂದ ವಂಚಿತವಾಗಿರುವ ಮಕ್ಕಳನ್ನು ಪತ್ತೆ ಹಚ್ಚಿ ಅವುಗಳಿಗೂ ಪೋಲಿಯೊ ಲಸಿಕೆ ಹಾಕಲಾಗುವುದಲ್ಲದೇ, ತಾಲೂಕಿನಲ್ಲಿ ಒಟ್ಟು 20.180ಮಕ್ಕಳಿಗೆ ಪೋಲಿಯೊ ಲಸಿಕೆಯನ್ನು ಹಾಕುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ತಾಲೂಕಿನ ತಟ್ಟೇಕೆರೆ, ಸೂರನಹಳ್ಳಿ, ಪಟ್ಟಣದ ಹೊರವಲಯ, ಮೂಡಲಹಿಪ್ಪೆ ಮೊದಲಾದ ಸ್ಥಳಗಳಲ್ಲಿ ಹೊರ ಊರುಗಳಿಂದ ಕೂಲಿ ಹಾಗೂ ಇತರೆ ಕೆಲಸಗಳಿಗಾಗಿ ವಲಸೆ ಬಂದಿರುವ 180 ಮಕ್ಕಳನ್ನು ಗುರುತಿಸಲಾಗಿದ್ದು, ಅವುಗಳಿಗೂ ಸ್ಥಳಕ್ಕೆ ತೆರಳಿ ಪೋಲಿಯೊ ಲಸಿಕೆಯನ್ನು ಹಾಕಲಾಗುವುದು ಎಂದು ವಿವರ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಆರ್.ಬಿ.ಪುಟ್ಟೇಗೌಡ, ಕಾರ್ಯದರ್ಶಿ ಶಿವಕುಮಾರ್, ರೆಡ್‌ಕ್ರಾಸ್ ತಾಲೂಕು ಘಟಕ ಅಧ್ಯಕ್ಷ ಡಾ.ಕೆ.ಸಿ.ಮರಿಯಪ್ಪ, ಶಿಕ್ಷಣ ಇಲಾಖೆ ಅಧಿಕಾರಿಗಳು, ಆಸ್ಪತ್ರೆಯ ಮೂಳೆ ತಜ್ಞ ಡಾ.ರಾಜೇಶ್, ರೋಟರಿ ಪದಾಧಿಕಾರಿಗಳು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

