ಎಸ್ಮಾ ಕಾಯ್ದೆ ವಿರೋಧಿಸಿ ವಿಧಾನಸೌಧ ಮುತ್ತಿಗೆ
ಹಾಸನ: ಕರಾಳ ಎಸ್ಮಾ ಕಾಯ್ದೆ ವಿರೋಧಿಸಿ ಹಾಗೂ ನಾನಾ ಬೇಡಿಕೆಗಳಿಗೆ ಆಗ್ರಹಿಸಿ ಜ. 23ರಂದು ಕಾರ್ಮಿಕರು ವಿಧಾನ ಸೌಧ ಮುತ್ತಿಗೆ ಹಾಕಲಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮೇಶ್ ತಿಳಿಸಿದ್ದಾರೆ.
ಕಾರ್ಮಿಕರ ಕನಿಷ್ಠ ವೇತನ ರು. 10000 ನಿಗದಿಪಡಿಸಬೇಕು. ಸಾಮಾಜಿಕ ಭದ್ರತೆ, ಗ್ಯಾರಂಟಿ ಪಿಂಚಣಿ ಜಾರಿಗಾಗಿ, ಮನೆ ನಿವೇಶನ, ಬಿಪಿಎಲ್- ಎಪಿಎಲ್ ತಾರತಮ್ಯವಿಲ್ಲದೆ ಎಲ್ಲರಿಗೂ ರೇಷನ್ ಕಾರ್ಡ್ಗಾಗಿ, ಕಾರ್ಮಿಕ ಕಾನೂನುಗಳ ಜಾರಿಗಾಗಿ ಹಾಗೂ ಗುತ್ತಿಗೆ ಕಾರ್ಮಿಕ ಪದ್ದತಿ, ಅಂಗನವಾಡಿ ಮತ್ತು ಸಾರ್ವಜನಿಕ ಕೈಗಾರಿಕೆಗಳ ಖಾಸಗೀಕರಣ ವಿರೋಧಿಸಿ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಉಗ್ರ ಖಂಡನೆ: ಅಗತ್ಯ ವಸ್ತುಗಳ ಬೆಲೆಗಳು ತೀವ್ರವಾಗಿ ಏರುತ್ತಿವೆ. ಅದರಲ್ಲೂ ಆಹಾರ ಪದಾರ್ಥಗಳ ಬೆಲೆಗಳು ಅನಿಯಂತ್ರಿತವಾಗಿ ಗಗನಕ್ಕೆ ಏರುತ್ತಿದೆ. ಡೀಸೆಲ್, ಪೆಟ್ರೋಲ್ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಪ್ರತಿ ತಿಂಗಳು ಒಂದೆರೆಡು ಬಾರಿ ಹೆಚ್ಚಿಸಲಾಗುತ್ತಿದೆ. ಅಲ್ಲದೇ ಇದೀಗ ಸಕ್ಕರೆ ನಿಯಂತ್ರಣವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಈ ಎಲ್ಲಾ ಕ್ರಮಗಳು ಉರಿಯುತ್ತಿರುವ ಬೆಲೆ ಏರಿಕೆಯ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ. ಸರ್ಕಾರದ ಈ ಎಲ್ಲಾ ಬೆಲೆ ನಿಯಂತ್ರಣ ಮಾಡದಿರುವ ನೀತಿಗಳನ್ನು ಸಿಐಟಿಯು ಉಗ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಮೂಲ ಸೌಲಭ್ಯ ಜಾರಿಗೆ ಒತ್ತಾಯ: ರಾಜ್ಯದಲ್ಲಿ ಪುನಃ ಕರಾಳ ಕಾಯ್ದೆಯಾದ ಎಸ್ಮಾ- ಅಗತ್ಯ ಸೇವೆಗಳ ನಿರ್ವಹಣಾ ಕಾನೂನು ಜಾರಿಗೆ ಮುಂದಾಗಿದೆ. ರಾಜ್ಯ ಸರ್ಕಾರದ ಇಂತಹ ಜನ ವಿರೋಧಿ ಕ್ರಮ ವಿರೋಧಿಸಿ, ಬೆಲೆ ಏರಿಕೆ ತಡೆಗಟ್ಟಬೇಕು. 2008ರ ಬೆಲೆಗಳ ಮಟ್ಟದಲ್ಲಿ ಕನಿಷ್ಟ 10 ಸಾವಿರ ಕನಿಷ್ಟ ವೇತನ ನಿಗದಿಪಡಿಸಬೇಕು, ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಎಲ್ಲಾ ಕಾರ್ಮಿಕರಿಗೂ ಬಿಪಿಎಲ್, ಎಪಿಎಲ್ ವ್ಯತ್ಯಾಸವಿಲ್ಲದೇ ಕಡಿಮೆ ದರದಲ್ಲಿ ರೇಷನ್ ವ್ಯವಸ್ಥೆ ಹಾಗೂ ವಸತಿ, ನಿವೇಶನ ಜಾರಿ ಮಾಡಬೇಕು ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದುಪಡಿಸಿ ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ವಿಭಾಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ನೌಕರರು, ಗುತ್ತಿಗೆ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಕಡ್ಡಾಯವಾಗಿ ಈ ಹೋರಾಟದಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

