'ನಿರ್ಲಕ್ಷ್ಯ ತೋರುವ ಸಿಬ್ಬಂದಿ ವಿರುದ್ಧ ಕ್ರಮ'
ಹೊಳೆನರಸೀಪುರ: ಸರ್ಕಾರದ ನಾನಾ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಎಚ್.ಡಿ. ರೇವಣ್ಣ ಹೇಳಿದ್ದಾರೆ.
ಇಲ್ಲಿನ ತಾಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ನಾನಾ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಡವರು- ಅಶಕ್ತರುಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ನಿರ್ಲಕ್ಷತೆ ತೋರುವವರ ವಿರುದ್ಧ ತಾವು ಇನ್ನು ಮುಂದೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕ್ರಮಕ್ಕೆ ಸೂಚನೆ: ತಾಲೂಕಿನಲ್ಲಿ ಮೂವರು ತಹಸೀಲ್ದಾರ್ ಗ್ರೇಡ್- 2 ಅಧಿಕಾರಿಗಳಿದ್ದು, ಮೂರು ಹೋಬಳಿಗಳಲ್ಲಿನ ಅರ್ಹರಿಗೆ ಹಸಿರು ಕಾರ್ಡ್ ತಲುಪಿದೆಯೇ ಎಂಬುದನ್ನು ಪರಿಶೀಲಿಸಿ, ಕಾರ್ಡ್ಗಳು ದೊರಕದೆ ಇರುವ ಅರ್ಹರನ್ನು ಕೂಡಲೇ ಪಟ್ಟಿ ಮಾಡಿ ಕಾರ್ಡ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ಅವರಿಗೆ ರೇವಣ್ಣ ಸೂಚಿಸಿದರಲ್ಲದೇ, ಅರ್ಹರಿಗೆ ಬಾಕಿ ಇರುವ ನಾನಾ ವೇತನಗಳ ಜಾರಿಗೂ ಶೀಘ್ರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದರು.
ಚೆಕ್ಗಳ ವಿತರಣೆ: ಈ ಸಂದರ್ಭದಲ್ಲಿ ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆಯಡಿಯಲ್ಲಿ ತಲಾ 10 ಸಾವಿರ ರು.ಗಳ ಚೆಕ್ಗಳನ್ನು 142 ಫಲಾನುಭವಿಗಳಿಗೆ ಹಾಗೂ ಅಮತ್ಯ ಸಂಸ್ಕಾರ ಯೋಜನೆಯಡಿಯಲ್ಲಿನ 172 ಫಲಾನುಭವಿಗಳಿಗೆ ಪರಿಹಾರದ ಚೆಕ್ಗಳನ್ನು ಶಾಸಕ ಎಚ್.ಡಿ. ರೇವಣ್ಣ ವಿತರಿಸಿದರು.
ಜಿಪಂ ಸದಸ್ಯ ಎಚ್.ಎನ್. ದೇವೇಗೌಡ (ಪಾಪಣ್ಣಿ), ತಹಸೀಲ್ದಾರ್ ಗ್ರೇಡ್-2 ಅಧಿಕಾರಿ ಪ್ರಸನ್ನಮೂರ್ತಿ, ಶಿರಸ್ತೇದಾರ್ ಉಲಿವಾಲ ಮೋಹನ್ ಕುಮಾರ್, ರಾಜಸ್ವ ನಿರೀಕ್ಷಕ ನಾಗರಾಜು, ಗ್ರಾಮ ಲೆಕ್ಕಾಧಿಕಾರಿ ಅಸ್ಲಂಪಾಷ, ಯೋಗೇಶ್, ಆಹಾರ ಇಲಾಖೆ ಅಧಿಕಾರಿ ರಾಮಚಂದ್ರ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

