ಹಾಸನ

ಪೊಲೀಸರ ವಿಚಾರಣೆ: ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ

Published On :

ಹಾಸನ: ಯುವಕನೋರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ.
ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಎ.ಗುಡುಗನಹಳ್ಳಿಯ ರಾಜೇಗೌಡ ಎಂಬವರ ಪುತ್ರ ಸಂತೋಷ್ (25) ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸ ನೀಡಲಾಗುತ್ತಿದೆ.
ಮಂಡ್ಯದಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಸಂತೋಷ್ ಪಡಿತರ ಚೀಟಿಗಾಗಿ ಫೋಟೊ ತೆಗಿಸಲೆಂದು ಸೋಮವಾರ ಹಾಸನಕ್ಕೆ ಆಗಮಿಸಿದ ವೇಳೆ, ಪೊಲೀಸರು ಆತನನ್ನು ಕಳ್ಳನೆಂದು ವಶಕ್ಕೆ ತೆಗೆದುಕೊಂಡು ಪೊಲೀಸ್ ಠಾಣೆಗೆ ಎಳೆದೊಯ್ದಿದ್ದರು. ಅಲ್ಲಿ ಪೊಲೀಸ್ ಸಿಬ್ಬಂದಿ ಆತನನ್ನು ವಿಚಾರಣೆ ನಡೆಸಿದ್ದರು. ನಂತರ ಸಂತೋಷ್ ಆರೋಪಿ ಅಲ್ಲ ಅಂತ ತಿಳಿದ ನಂತರ ಆತನನ್ನು ಬಿಡಲಾಗಿತ್ತು.  ಇದರಿಂದ ಮನನೊಂದ ಸಂತೋಷ್ ಮನೆಗೆ ಬಂದು, ಅವಮಾನ ಸಹಿಸಲಾರದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ಕುಟುಂಬದವರು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪ: ಹಾಸನ ಗ್ರಾಮಾಂತರ ಪೊಲೀಸರು ಸುಳ್ಳು ಹೇಳಿ ಸಂತೋಷ್ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡೋ ರೀತಿಯಲ್ಲಿ ಥಳಿಸಿದಿದ್ದಾರೆ ಎಂದು ಸಂತೋಷ್ನ ಕುಟುಂಬದವರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.