ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರು ವಶ
ಅರಸೀಕೆರೆ: ಪಟ್ಟಣದ ಹೊರವಲಯದಲ್ಲಿ ಇರುವ ಕಸ್ತೂರಬಾ ಟ್ರಸ್ಟ್ ಸಮೀಪ ಬುಧವಾರ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದವರನ್ನು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 7 ಬಡಕಲು ಹಸುಗಳು ಹಾಗೂ ವಾಹನದ ಕ್ಲೀನರ್ ಅಲ್ಲಾಬಾಷ್ನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ಬಾಬು ಸ್ಥಳದಿಂದ ಪರಾರಿಯಾಗಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೋವುಗಳನ್ನು ವಶಕ್ಕೆ ಪಡೆದ ಸುದ್ದಿ ತಿಳಿಯುತ್ತಿದ್ದಂತೆ ಗೋ ಪರಿವಾರದ ಮುಖಂಡ ಪಾರಸ್ ಜೈನ್ ಠಾಣೆಗೆ ಆಗಮಿಸಿ ವಶಕ್ಕೆ ಪಡೆದಿರುವ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಮನವಿ ಮಾಡಲು ಮುಂದಾಗಿದ್ದ ವೇಳೆ ಕಸಾಯಿಖಾನೆ ಮಾಲೀಕರು ಹಾಗೂ ದಲ್ಲಾಳಿಗಳು ಪಾರಸ್ ಜೈನ್ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ ನಂತರ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮನೆ ಮಂದೆ ದಾಂದಲೆ: ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಆಕ್ರೋಶಗೊಂಡ ದಲ್ಲಾಳಿಗಳು ಹಾಗೂ ಕಸಾಯಿಖಾನೆ ಮಾಲೀಕರು ಪೊಲೀಸರಿಗೆ ಗೋವುಗಳ ಸಾಗಾಣಿಕೆಯ ಬಗ್ಗೆ ಮುಖಂಡ ಪಾರಸ್ ಜೈನ್ ಮಾಹಿತಿ ನೀಡಿದ್ದಾರೆಂದು ಭಾವಿಸಿ ಅವರ ಮನೆಯ ಮುಂಭಾಗ ತೆರಳಿ ದಾಂದಲೆ ನಡೆಸಿ ಮನೆಯ ಮೇಲೆ ಕಲ್ಲುಗಳನ್ನು ತೂರಿ ಮನೆಯಲ್ಲಿದ್ದ ಹೆಂಗಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರಲ್ಲದೆ ಹಲ್ಲೆಗೆ ಮುಂದಾಗಿದ್ದಾರೆನ್ನಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರ ಮಧ್ಯ ಪ್ರವೇಶದಿಂದ ಅನಾಹುತಮೊಂದು ತಪ್ಪಿದಂತಾಗಿದೆ. ನಗರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿ ಪರಿಸ್ಥಿತಿ ತಹಬದಿಗೆ ತಂದಿದ್ದು ಇದೇ ವೇಳೆ ತಮಗೆ ರಕ್ಷಣೆ ನೀಡುವಂತೆ ಪಾರಸ್ ಜೈನ್ ಪೊಲೀಸರಿಗೆ ದೂರು ನೀಡಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

