ಜಿಲ್ಲಾ ಯುವ ಕಾಂಗ್ರೆಸ್ನಲ್ಲಿ ಭಿನ್ನಮತ ಇಲ್ಲ: ಸ್ಪಷ್ಟನೆ
ಸಕಲೇಶಪುರ: ಜಿಲ್ಲಾ ಯುವ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಕೌಡಳ್ಳಿ ಲೋಹಿತ್ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆ ಸ್ಪರ್ಧಾ ಮನೋಭಾವದಿಂದ ಕೂಡಿದ್ದು, ತಮ್ಮ ಬೆಂಬಲಿಗರನ್ನು ಗೆಲ್ಲಿಸಲು ಹಿರಿಯ ಕಾಂಗ್ರೆಸ್ ನಾಯಕರು ಹೋರಾಟ ನಡೆಸಿದ್ದಾರೆ. ಆದರೆ, ಇದನ್ನು ವಿರೋಧ ಪಕ್ಷದವರು ಭಿನ್ನಾಭಿಪ್ರಾಯ ಎಂದು ಕರೆಯುವುದು ಸರಿಯಲ್ಲ ಎಂದರು.
5 ವರ್ಷಗಳಿಂದ ತಾಲೂಕಿನ ಕುಂದು- ಕೊರತೆಗಳನ್ನು ಬಯಲಿಗೆಳೆಯವ ಮೂಲಕ ಪಕ್ಷ ಸಂಘಟನೆ ಮಾಡಲಾಗಿದೆ ಎಂದರು.
ಕರೆ: ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷವನ್ನು ಸಂಘಟಿಸಿ, ಪಕ್ಷವನ್ನು ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಆಶ್ರಫ್, ಗ್ರಾಮ ಪಂಚಾಯ್ತಿ ಸದಸ್ಯ ಸುಧಾಕರ್, ವಡ್ಡರಹಳ್ಳಿ ಅನಿಲ್, ಪ್ರವೀಣ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

