ಅತಿಥಿ ಉಪನ್ಯಾಸಕರ ಅನಿರ್ದಿಷ್ಟ ಪ್ರತಿಭಟನೆ
ಹೊಳೆನರಸೀಪುರ: ಪಟ್ಟಣದ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಕಾಲೇಜನ್ನು ತೊರೆದು ಅನಿರ್ದಿಷ್ಟ ಪ್ರತಿಭಟನೆ ಆರಂಭಿಸಿದರು.
ಇತರೆ ಕಾಯಂ ನೌಕರರಂತೆ ಪರಿಗಣಿಸಬೇಕು, ಸೇವಾ ಭದ್ರತೆ ದೊರಕಬೇಕು, ಒಮ್ಮೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸೇವೆಯಲ್ಲಿ ಮುಂದುವರೆಸಬೇಕು, ಈಗ ನೀಡುತ್ತಿರುವ ವೇತನವನ್ನು ಹೆಚ್ಚಿಸಿ ಖಾಯಂ ನೌಕರರಂತೆ ಪರಿಗಣಿಸಬೇಕು ಎಂದು ಅತಿಥಿ ಉಪನ್ಯಾಸಕರ ಸಂಘಟನೆ ಮುಖಂಡ ಕೆ.ಎನ್. ವರದರಾಜು ಆಗ್ರಹಿಸಿದರು.
ವೇತನ ನೀಡಿಕೆಯಲ್ಲಿ ಆಗುತ್ತಿರುವ ತಾರತಮ್ಯಗಳನ್ನು ಹೋಗಲಾಡಿಸಿ, ಅಯಾ ತಿಂಗಳು ವೇತನ ನೀಡಬೇಕು, ಜತೆಗೆ ಎಲ್ಲರಿಗೂ ದೊರೆಯುವಂತಾ ಮೂಲಭೂತಸೌಕರ್ಯಗಳನ್ನು ಕಲ್ಪಿಸಿಬೇಕೆಂದು ಆಗ್ರಹಪಡಿಸಿದ ಉಪನ್ಯಾಸಕರು ನಮ್ಮ ಬೇಡಿಕೆ ಈಡೇರಿಕೆ ಆಗುವವರೆಗೆ ನಾವು ಕಾಲೇಜಿನಲ್ಲಿ ಭೋದನೆ ಮಾಡುವುದಿಲ್ಲ ಎಂದು ಹೇಳಿದರು.
ಪ್ರಸ್ತುತ ಅತಿಥಿ ಉಪನ್ಯಾಸಕರು ಅನೇಕ ಸಮಸ್ಯೆಗಳು ಎದುರಿಸುವಂತಾಗಿದೆ. ಪ್ರತಿಭಟನೆಗಳು ರಾಜ್ಯದಾದ್ಯಂತ ನಡೆಯುತ್ತಿದ್ದು ರಾಜ್ಯ ಸರ್ಕಾರ ತ್ವರಿತವಾಗಿ ಕ್ರಮಕೈಗೊಳ್ಳಬೇಕು. ರಾಜ್ಯ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

