ಹಾಸನ

'ರಸ್ತೆ ನಿಯಮ ಪಾಲಿಸಿ, ಜೀವ ರಕ್ಷಿಸಿಕೊಳ್ಳಿ'

Published On :

ಹಾಸನ: ರಸ್ತೆ ಸುರಕ್ಷತೆಯ ಕಾನೂನನ್ನು ಪಾಲಿಸುವುದರ ಮೂಲಕ ಅಮೂಲ್ಯವಾದ ಜೀವವನ್ನು ರಕ್ಷಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಕರೆ ನೀಡಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸಂಚಾರಿ ಪೊಲೀಸ್ ಠಾಣೆ, ರೋಟರಿ ಕ್ಲಬ್ನ ವಿವಿಧ ಸಂಸ್ಥೆಗಳು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾರಿಗೆ ತರಲಾಗಿರುವ ಕಾನೂನನ್ನು ವಾಹನ ಚಾಲಕರು ಪಾಲಿಸುವುದರ ಜತೆಗೆ ತಮ್ಮ ಪ್ರಾಣ ಉಳಿಯುವುದಲ್ಲದೆ ಮತ್ತೊಬ್ಬರ ಜೀವ ಉಳಿಸಬಹುದು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮೊದಲು ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಜಾಥಾವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣ ಚಾಲನೆ ನೀಡಿದರು. ನಂತರ ಕಸಾಪ ಅವರಣದಲ್ಲಿ ಆಟೋಗಳಿಗೆ ವಾಹನ ಚಾಲನೆ ರಸ್ತೆ ಸುರಕ್ಷತೆ ಬಗೆಗಿನ ಜಾಗೃತಿಯುಳ್ಳ ಫಲಕವನ್ನು  ಅಂಟಿಸುವುದರ ಮೂಲಕ ಚಾಲನೆ ನೀಡಿದರು.
ರೋಟರಿ ಕ್ಲಬ್ ಗವರ್ನರ್ ಗುರುರಾಜ್ ದಂಪತಿ, ಅಧ್ಯಕ್ಷ ನಟೇಶ್, ಜಿತೇಂದ್ರ, ಸತ್ಯನಾರಾಯಣ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಅಧ್ಯಕ್ಷ ಸುರೇಶ್ ಗುರೂಜಿ, ಖಜಾಂಚಿ ಚಿನ್ನೇನಹಳ್ಳಿ ಸ್ವಾಮಿ, ಕಾರ್ಯದರ್ಶಿ ಡಾ. ವಿವೇಕಾನಂದ, ರಮೇಶ್, ಮದನಗೌಡ ಇತರರು ಇದ್ದರು. ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಭಾನು  ಸ್ವಾಗತಿಸಿದರು. ಸಮಾಜ ಸೇವಕ ಆರ್.ಕೆ. ಸ್ವರೂಪ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.